ಐಪಿಎಲ್ 2022: 5 ಬಾರಿ ಚಾಂಪಿಯನ್ ಮುಂಬೈಗೆ ಸತತ 5ನೇ ಸೋಲು, 12ರನ್ ಅಂತರದಲ್ಲಿ ಗೆದ್ದ ಪಂಜಾಬ್!!
ಐಪಿಎಲ್ 2022ರ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸೋಲಿನ ಸರಣಿ ಮುಂದುವರೆದಿದ್ದು, 5 ಬಾರಿ ಚಾಂಪಿಯನ್ ತಂಡ ಹಾಲಿ ಟೂರ್ನಿಯಲ್ಲಿ ಸತತ 5ನೇ ಸೋಲು ಅನುಭವಿಸಿದೆ.
Published: 13th April 2022 11:55 PM | Last Updated: 13th April 2022 11:55 PM | A+A A-

ಪಂಜಾಬ್ ಗೆ ಜಯ
ಮುಂಬೈ: ಐಪಿಎಲ್ 2022ರ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸೋಲಿನ ಸರಣಿ ಮುಂದುವರೆದಿದ್ದು, 5 ಬಾರಿ ಚಾಂಪಿಯನ್ ತಂಡ ಹಾಲಿ ಟೂರ್ನಿಯಲ್ಲಿ ಸತತ 5ನೇ ಸೋಲು ಅನುಭವಿಸಿದೆ.
ಬುಧವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 12 ರನ್ ಅಂತರದ ರೋಚಕ ಗೆಲುವು ದಾಖಲಿಸಿದ್ದು, ಈ ಮೂಲಕ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಸತತ ಐದನೇ ಸೋಲಿನ ಮುಖಭಂಗಕ್ಕೆ ಒಳಗಾಗಿದೆ. ಇನ್ನೊಂದೆಡೆ ಮಯಂಕ್ ಪಡೆ, ಆಡಿರುವ ಐದು ಪಂದ್ಯಗಳಲ್ಲಿ ಮೂರನೇ ಗೆಲುವು ದಾಖಲಿಸಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಲ್ಪಟ್ಟ ಪಂಜಾಬ್, ನಾಯಕ ಮಯಾಂಕ್ ಅಗರ್ವಾಲ್ (52) ಹಾಗೂ ಅನುಭವಿ ಬ್ಯಾಟರ್ ಶಿಖರ್ ಧವನ್ (70) ಆಕರ್ಷಕ ಅರ್ಧಶತಕಗಳ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 198 ರನ್ ಪೇರಿಸಿತ್ತು. ಬಳಿಕ ಈ ಬೃಹತ್ ಗುರಿ ಬೆನ್ನತ್ತಿದ ಮುಂಬೈ ಒಂಬತ್ತು ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಬೃಹತ್ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 186ರನ್ ಗಳಿಸಿ 12 ರನ್ ಗಳ ಅಂತರದ ಸೋಲು ಕಂಡಿತು.