ಐಪಿಎಲ್ 2022: ಕೆ.ಎಲ್ ರಾಹುಲ್ ಭರ್ಜರಿ ಶತಕ, ಮುಂಬೈ ಇಂಡಿಯನ್ಸ್ ವಿರುದ್ಧ ಲಖನೌ ಗೆಲುವು
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್, ಕೆ.ಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್ಗಳಿಂದ ಗೆಲುವು ಸಾಧಿಸಿದೆ.
Published: 25th April 2022 12:39 AM | Last Updated: 25th April 2022 12:39 AM | A+A A-

ಕೆ.ಎಲ್ ರಾಹುಲ್
ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್, ಕೆ.ಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ಜೈಂಟ್ಸ್, ಮುಂಬೈ ಇಂಡಿಯನ್ಸ್ ಗೆಲುವಿಗೆ 169 ರನ್ಗಳ ಗುರಿ ನೀಡಿತು. ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ಗಳಿಸಿ ಸೋಲು ಒಪ್ಪಿಕೊಂಡಿತು. ಇದರೊಂದಿಗೆ ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸಕ್ತ ಸೀಸನ್ನಲ್ಲಿ ಮತ್ತೊಂದು ಸೋಲು ಅನುಭವಿಸಿತು.
ಇದನ್ನು ಓದಿ: ನೋ ಬಾಲ್ ವಿವಾದ: ರಿಷಬ್ ಪಂತ್, ಠಾಕೂರ್ ಗೆ ಭಾರಿ ದಂಡ, ಆಮ್ರೆಗೆ ಒಂದು ಪಂದ್ಯ ನಿಷೇಧ ಹೇರಿದ ಐಪಿಎಲ್ ಆಡಳಿತ ಮಂಡಳಿ
ಲಖನೌ ಪರ ಏಕಾಂಗಿ ಹೋರಾಟ ನಡೆಸಿದ ಕೆಎಲ್ ರಾಹುಲ್, 62 ಎಸೆತಗಳಲ್ಲಿ ಅಜೇಯ 103 ರನ್ಗಳನ್ನು ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು. ಕೃಣಾಲ್ ಪಾಂಡ್ಯ 3 ವಿಕೆಟ್ ಕಿತ್ತರೆ, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ಆಯುಶ್ ಬದೋನಿ ಮತ್ತು ರವಿ ಬಿಷ್ಣೋಯ್ ತಲಾ ಒಂದು ವಿಕೆಟ್ ಪಡೆದು ತಂಡದ ಗೆಲುವಿಗೆ ಬಲವಾದರು.
ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ (39) ಮತ್ತು ತಿಲಕ್ ವರ್ಮಾ (38) ಹೊರತಾಗಿ ಉಳಿದ ಬ್ಯಾಟರ್ಗಳು ರನ್ ಗಳಿಸುವ ಗೋಜಿಗೆ ಬೀಳಲಿಲ್ಲ. ಪರಿಣಾಮ ಸತತ 8ನೇ ಸೋಲಿನ ಆಘಾತ ಅನುಭವಿಸಿತು.