ಏಷ್ಯಾ ಕಪ್ ಟಿ-20: ಆಗಸ್ಟ್ 28ಕ್ಕೆ ಸಾಂಪ್ರದಾಯಿಕ ಎದುರಾಳಿ ಭಾರತ- ಪಾಕ್ ಮುಖಾಮುಖಿ

ದುಬೈನಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಏಷ್ಯಾ ಕಪ್ ಟಿ-20 ಟೂರ್ನಿಯ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ ಎಂದು ಆಯೋಜಕರು ಮಂಗಳವಾರ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್
ವಿರಾಟ್ ಕೊಹ್ಲಿ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್

ನವದೆಹಲಿ: ದುಬೈನಲ್ಲಿ ಆಗಸ್ಟ್ 28 ರಂದು ನಡೆಯಲಿರುವ ಏಷ್ಯಾ ಕಪ್ ಟಿ-20 ಟೂರ್ನಿಯ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ ಎಂದು ಆಯೋಜಕರು ಮಂಗಳವಾರ ತಿಳಿಸಿದ್ದಾರೆ. ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಕ್ರಿಕೆಟ್ ನಿರ್ಬಂಧಿಸಲಾಗಿದ್ದು, ಬಹು ರಾಷ್ಟ್ರಗಳ ಟೂರ್ನಿಯಲ್ಲಿ ಮಾತ್ರ ಆಡುತ್ತಿವೆ.

ವರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದ್ದು, ಟೂರ್ನಿಯಲ್ಲಿ ಹೆಚ್ಚಿನ ಕುತೂಹಲ ಕೆರಳಿಸಿದೆ. ಶ್ರೀಲಂಕಾದಲ್ಲಿ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟು ಉದ್ಬವಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು 9 ತಂಡಗಳ ಟಿ-20 ಟೂರ್ನಿಯನ್ನು ಶ್ರೀಲಂಕಾದಿಂದ ಯುಎಇಗೆ ಸ್ಥಳಾಂತರಿಸಲಾಗಿದೆ.  

ದುಬೈನಲ್ಲಿ ಕಳೆದ ವರ್ಷ ನಡೆದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್ ಗಳಿಂದ ಭಾರತವನ್ನು ಮಣಿಸಿತ್ತು. ಸೆಫ್ಟೆಂಬರ್ 11 ರಂದು ಫೈನಲ್ ಸೇರಿದಂತೆ 10 ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು, ಮೂರು ಪಂದ್ಯಗಳು ಶಾರ್ಜಾದಲ್ಲಿ ನಡೆಯಲಿವೆ ಎಂದು ಎಸಿಸಿ ಅಧ್ಯಕ್ಷ ಜಯ್ ಶಾ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನವಿದೆ. ಬಿ ಗ್ರೂಪ್ ನಲ್ಲಿ ಶ್ರಿಲಂಕಾ, ಬಾಂಗ್ಲಾದೇಶ ಮತ್ತು ಅಪ್ಘಾನಿಸ್ತಾನವಿದೆ. ಭಾರತ- ಪಾಕಿಸ್ತಾನ ನಡುವಣ ಪಂದ್ಯ ಟೂರ್ನಿಯ ಪ್ರಮುಖ ಆಕರ್ಷಣೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com