ವೆಸ್ಟ್ ಇಂಡೀಸ್ ವಿರುದ್ಧ ಐದನೇ ಟಿ-20: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ನಗರದ ಸೆಂಟ್ರಲ್ ಬ್ರೊವಾರ್ಡ್ ರಿಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ನಡುವಣ ಐದನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
Published: 07th August 2022 08:14 PM | Last Updated: 07th August 2022 08:20 PM | A+A A-

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ
ಲಾಡರ್ ಹಿಲ್: ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ನಗರದ ಸೆಂಟ್ರಲ್ ಬ್ರೊವಾರ್ಡ್ ರಿಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ನಡುವಣ ಐದನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನೂ ಓದಿ: ನಾಲ್ಕನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 59 ರನ್ ಗಳ ಭರ್ಜರಿ ಗೆಲುವು
ನಿನ್ನೆ ನಡೆದ 4ನೇ ಟಿ-20 ಪಂದ್ಯದಲ್ಲಿ 59 ರನ್ ಗಳ ಅಂತರದಿಂದ ವೆಸ್ಟ್ ಇಂಡೀಸ್ ಮಣಿಸಿದ ಭಾರತ ಇಂದಿನ ಪಂದ್ಯವನ್ನು ಗೆದ್ದು ಸರಣಿ ಕೈ ವಶ ಮಾಡಿಕೊಳ್ಳುವ ತವಕದಲ್ಲಿದೆ. ವೆಸ್ಟ್ ಇಂಡೀಸ್ ಕೂಡಾ ಇಂದಿನ ಪಂದ್ಯದಲ್ಲಿ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ. ಟೀಂ ಇಂಡಿಯಾದಲ್ಲಿ ಇಶಾನ್ ಕಿಶಾನ್ ಮತ್ತು ಕುಲದೀಪ್ ಯಾದವ್ ಅವರಿಗೆ ಇಂದಿನ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ.
ಈ ಮಧ್ಯೆ ವೆಸ್ಟ್ ಇಂಡೀಸ್ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಟೀಂ ಇಂಡಿಯಾ ಇಂದಿನ ಪಂದ್ಯ ಗೆಲ್ಲುವುದರೊಂದಿಗೆ ಸರಣಿ ಕೈ ವಶ ಮಾಡಿಕೊಳ್ಳಲಿದೆಯೇ? ವೆಸ್ಟ್ ಇಂಡೀಸ್ ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳಲಿಯೇ ಎಂಬುದನ್ನು ಕಾದು ನೋಡಬೇಕಾಗಿದೆ.
ಟೀಂ ಇಂಡಿಯಾ ಇಂತಿದೆ: ಇಶಾನ್ ಕಿಶಾನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್) ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.
Fifth T20I: India win the toss and opt to bat first against West Indies#INDvsWI pic.twitter.com/rzi3NzGxA0
— ANI (@ANI) August 7, 2022