ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆ
ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.
Published: 08th August 2022 10:19 PM | Last Updated: 09th August 2022 01:21 PM | A+A A-

ಟೀಂ ಇಂಡಿಯಾ ಆಟಗಾರರು
ನವದೆಹಲಿ: ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಭುವನೇಶ್ವರ್ ಕುಮಾರ್ ನೇತೃತ್ವದಲ್ಲಿ ಬೌಲಿಂಗ್ ದಾಳಿ ನಡೆಸಲಾಗುತ್ತದೆ. ಆದಾಗ್ಯೂ, ಅಕ್ಸರ್ ಪಟೇಲ್, ಶ್ರೇಯಸ್ ಅಯ್ಯರ್ ಮತ್ತು ದೀಪಕ್ ಚಾಹರ್ ಅವರನ್ನು ಸ್ಟ್ಯಾಂಡ್ ಬೈ ಆಟಗಾರರಾಗಿ ಇರಿಸಲಾಗಿದೆ. ಇಶಾನ್ ಕಿಶಾನ್ ಗೆ ಅವಕಾಶ ಸಿಕ್ಕಿಲ್ಲ. ದೀಪಕ್ ಹೂಡಾ ಅವರೊಂದಿಗೆ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಪಂದ್ಯವಾಡಲು ಭಾರತ ನಿರ್ಧರಿಸಿದೆ.
ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಕಾರಣದಿಂದಾಗಿ ಆಯ್ಕೆಗೆ ಲಭ್ಯವಾಗಿಲ್ಲ. ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಅವರನ್ನು ಸ್ಟ್ಯಾಂಡ್‌ಬೈ ಎಂದು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಟೀಂ ಇಂಡಿಯಾಗೆ ಹಿನ್ನಡೆ: ಗಾಯದ ಸಮಸ್ಯೆಯಿಂದ ಏಷ್ಯಾಕಪ್‌ನಿಂದ ಹೊರಗುಳಿದ ಜಸ್ ಪ್ರೀತ್ ಬುಮ್ರಾ!
ಏಷ್ಯಾಕಪ್ ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಕೆಎಲ್ ರಾಹುಲ್ ( ಉಪ ನಾಯಕ) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೇಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್
ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್
#TeamIndia squad for Asia Cup 2022 - Rohit Sharma (Capt ), KL Rahul (VC), Virat Kohli, Suryakumar Yadav, Deepak Hooda, R Pant (wk), Dinesh Karthik (wk), Hardik Pandya, R Jadeja, R Ashwin, Y Chahal, R Bishnoi, Bhuvneshwar Kumar, Arshdeep Singh, Avesh Khan.
— BCCI (@BCCI) August 8, 2022