ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್‌ಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ
ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ.
Published: 08th August 2022 07:17 PM | Last Updated: 08th August 2022 07:17 PM | A+A A-

ರಾಜೇಶ್ವರಿ ಗಾಯಕ್ವಾಡ್
ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸೋಮವಾರ ಅಭಿನಂದಿಸಿದ್ದಾರೆ.
ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.
ಇದನ್ನು ಓದಿ: ಕಾಮನ್ ವೆಲ್ತ್ ಗೇಮ್ಸ್ 2022: ಕ್ರಿಕೆಟ್ ಫೈನಲ್ ನಲ್ಲಿ ಎಡವಿದ ಭಾರತ ವನಿತೆಯರು, ಬೆಳ್ಳಿಗೆ ತೃಪ್ತಿ
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಟೀಂ ಇಂಡಿಯಾಕ್ಕೆ ಬಂಗಾರದ ಪದಕ ಕೈತಪ್ಪಿತ್ತು.