ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕ

ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ.
ಕೆಎಲ್ ರಾಹುಲ್
ಕೆಎಲ್ ರಾಹುಲ್

ನವದೆಹಲಿ: ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡದಿಂದ ಕೆಎಲ್ ರಾಹುಲ್ ಅವರ ಫಿಟ್ನೆಸ್ ದೃಢಗೊಂಡ ಬಳಿಕ ಅವರನ್ನು ಈ ಸರಣಿಗೆ ಟೀಂ ಇಂಡಿಯಾದ ನಾಯಕನಾಗಿ ಪ್ರಕಟಿಸಲಾಗಿದೆ. ಶಿಖರ್ ಧವನ್ ಉಪ ನಾಯಕರಾಗಿದ್ದಾರೆ.

ಈ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬೂಮ್ರಾ , ಮೊಹಮ್ಮದ್ ಶಮಿ ಆಡುತ್ತಿಲ್ಲ. ಬೂಮ್ರಾ ಆಗಸ್ಟ್ 27 ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಯಿಂದಲೂ ಹೊರ ಬಿದಿದ್ದಾರೆ. ಈ ಟೂರ್ನಿಯಲ್ಲಿ ರಾಹುಲ್ , ದೀಪಕ್ ಹೂಡಾ ಮಾತ್ರ ಪ್ರಮುಖ ಆಟಗಾರರಾಗಿದ್ದಾರೆ.

ಏಕದಿನ ಸರಣಿ ಆಗಸ್ಟ್ 18 ರಂದು ಜಿಂಬಾಬ್ವೆಯ ಹರಾರೆಯಲ್ಲಿ ಆರಂಭವಾಗಲಿದ್ದು, ಆಗಸ್ಟ್ 22 ರಂದು ಕೊನೆಯ ಏಕದಿನ ಪಂದ್ಯ ನಡೆಯಲಿದೆ. 

ಟೀಂ ಇಂಡಿಯಾ ಇಂತಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ ( ಉಪ ನಾಯಕ) ಋತುರಾಜ್ ಗಾಯಕ್ ವಾಡ್, ಶುಭ್ ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್ (ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್) ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com