ನಾಳೆಯಿಂದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ: ಒಟಿಟಿ, ದೂರದರ್ಶನದಲ್ಲೂ ನೇರಪ್ರಸಾರ

ಬಹು ನಿರೀಕ್ಷಿತ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆಯಿಂದ ಅಂದರೆ ಆಗಸ್ಟ್ 27ರಿಂದ ಟೂರ್ನಿ ಆರಂಭವಾಗಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಬಹು ನಿರೀಕ್ಷಿತ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆಯಿಂದ ಅಂದರೆ ಆಗಸ್ಟ್ 27ರಿಂದ ಟೂರ್ನಿ ಆರಂಭವಾಗಲಿದೆ. 

ಬಹು ನಿರೀಕ್ಷಿತ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ನಾಳೆಯಿಂದ ಆರಂಭವಾಗುತ್ತಿದ್ದು, ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಇತ್ತೀಚೆಗಷ್ಟೆ ಅರ್ಹತೆ ಪಡೆದುಕೊಂಡ ಹಾಂಗ್‌ಕಾಂಗ್ ಈ 6 ತಂಡಗಳು ಕಣಕ್ಕಿಳಿಯಲಿವೆ. ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಪಂದ್ಯಗಳು ಜರುಗಲಿದ್ದು, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಟೂರ್ನಿಯ ಚೊಚ್ಚಲ ಪಂದ್ಯ ನಡೆಯಲಿದೆ.

ಇದು ಗ್ರೂಪ್ 'ಬಿ'ನ ಪ್ರಥಮ ಪಂದ್ಯವಾದರೆ, ಎ ಗುಂಪಿನ ಚೊಚ್ಚಲ ಪಂದ್ಯ ಆಗಸ್ಟ್ 28ರ ಭಾನುವಾರದಂದು ಇದೇ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಜರುಗಲಿದೆ. ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಪ್ರತಿಷ್ಠಿತ ಐಸಿಸಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯಲಿದ್ದು, ಇದಕ್ಕೂ ಮುನ್ನ ನಡೆಯುತ್ತಿರುವ ಈ ಏಷ್ಯಾಕಪ್ ಸದ್ಯ ಮಿನಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಎಂದು ಬಿಂಬಿತವಾಗಿದೆ. ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳಲ್ಲಿ ಉಭಯ ಗುಂಪುಗಳಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಳ್ಳಲಿರುವ ತಂಡಗಳು ಸೂಪರ್ 4 ಸುತ್ತಿಗೆ ಪ್ರವೇಶಿಸಲಿದ್ದು, ಇಲ್ಲಿ ಅತಿ ಹೆಚ್ಚು ಪಂದ್ಯ ಗೆಲ್ಲುವ 2 ತಂಡಗಳು ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲಿವೆ.

ಪಂದ್ಯಗಳ ವೇಳಾಪಟ್ಟಿ ಇಂತಿದೆ

ದೂರದರ್ಶನದಲ್ಲೂ ನೇರಪ್ರಸಾರ
ಇನ್ನು ಹಾಲಿ ಟೂರ್ನಿಯ ನೇರಪ್ರಸಾರ ಭಾರತದಲ್ಲಿ ಸ್ಟಾರ್ ಸ್ಪೋರ್ಟ್ ನೆಟ್‌ವರ್ಕ್ ಚಾನೆಲ್‌ನಲ್ಲಿ ಲಭ್ಯವಿರಲಿದ್ದು, ಏಷ್ಯಾಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ (ಇಂಗ್ಲಿಷ್), ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಎಚ್‌ಡಿ (ಹಿಂದಿ) ಚಾನೆಲ್‌ಗಳಲ್ಲಿ ಲಭ್ಯವಿರಲಿದೆ. ಇದರ ಜೊತೆಗೆ ದೂರದರ್ಶನದಲ್ಲೂ ನೇರಪ್ರಸಾರ ಲಭ್ಯವಾಗಲಿದೆ.

ಒಟಿಟಿಯಲ್ಲಿ ನೇರಪ್ರಸಾರ
ಇದಲ್ಲದೇ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಒಟಿಟಿಯಲ್ಲಿ ನೇರಪ್ರಸಾರವಾಗಲಿದ್ದು, ಡಿಸ್ನೆ ಪ್ಲಸ್ ಹಾಟ್‌ಸ್ಟಾರ್ ಒಟಿಟಿ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ನೇರಪ್ರಸಾರ ಲಭ್ಯವಿರಲಿದೆ. ಹೀಗಾಗಿ ನಿಮ್ಮ ಮೊಬೈಲ್‌ನಲ್ಲಿ ಹಾಟ್‌ಸ್ಟಾರ್ ಅಪ್ಲಿಕೇಷನ್ ಮೂಲಕ ಪಂದ್ಯಗಳ ನೇರ ಪ್ರಸಾರವನ್ನು ನೋಡಬಹುದಾಗಿದೆ.

ಏಷ್ಯಾಕಪ್ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com