
ಪಾಕ್- ಭಾರತ ತಂಡದ ನಾಯಕರುಗಳ ಮಾತುಕತೆಯ ಚಿತ್ರ
ದುಬೈ: ಸುಮಾರು ಒಂದು ವರ್ಷದ ನಂತರ ನಾಳೆ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಏಷ್ಯಾಕಪ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಐಸಿಸಿ ಟಿ-20 ವಿಶ್ವಕಪ್ 2021ರ ಐತಿಹಾಸಿಕ ಪಂದ್ಯದ ನಂತರ ನಾಳೆ ಭಾರತ- ಪಾಕಿಸ್ತಾನ ಎದುರಾಗುತ್ತಿದ್ದು, ಹೈವೊಲ್ಟೇಜ್ ಪಂದ್ಯ ವೀಕ್ಷಿಸಲು ಪ್ರಪಂಚದಾದ್ಯಂತ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: ಎಲ್ಲಾ ಫಾರ್ಮ್ಯಾಟ್ ಗಳಲ್ಲಿಯೂ 100 ಪಂದ್ಯಗಳನ್ನಾಡಿದ ಏಕೈಕ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಪಾತ್ರ
ಏಷ್ಯಾಕಪ್ ಪಂದ್ಯದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಭ್ಯಾಸದ ನಂತರ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಉಭಯ ತಂಡಗಳ ನಾಯಕರ ಸಂವಾದದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
©️ meets ©️#AsiaCup2022 pic.twitter.com/OgnJZpM9B1
— Pakistan Cricket (@TheRealPCB) August 27, 2022
ಜಸ್ಪ್ರೀತ್ ಬೂಮ್ರಾ ಮತ್ತು ಶಾಹೀನ್ ಶಾ ಆಫ್ರಿದಿ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ನಾಳಿನ ಪಂದ್ಯವನ್ನು ಆಡಲಿವೆ. ಬೂಮ್ರಾ ಬೆನ್ನುನೋವಿನಿಂದ ಬಳಲುತ್ತಿದ್ದರೆ, ಆಫ್ರಿದಿ ಬಲ ಮೊಣಕಾಲಿನ ಅಸ್ಥಿ ರಜ್ಜು ಗಾಯದ ಸಮಸ್ಯೆಯಿಂದ ಚಿಕಿತ್ಸೆಗೊಳಗಾಗಿದ್ದಾರೆ. ಬೂಮ್ರಾ ಅನುಪಸ್ಥಿತಿಯ ಟೀಂ ಇಂಡಿಯಾದಲ್ಲಿ ಅರ್ಶದೀಪ್ ಸಿಂಗ್ ಹಾಗೂ ಅವೇಶ್ ಖಾನ್ ಅವರಿಗೆ ಅವಕಾಶ ನೀಡಲಾಗಿದೆ.