ಏಷ್ಯಾಕಪ್ 2022: ಪಾಕ್ ವಿರುದ್ಧ ಹೈ ವೋಲ್ಟೇಜ್ ಪಂದ್ಯ, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಏಷ್ಯಾಕಪ್ 2022 ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ದುಬೈ: ಏಷ್ಯಾಕಪ್ 2022 ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಏಷ್ಯಾ ಕಪ್ 2022 ರ ಎರಡನೇ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಈ ಪಂದ್ಯ ವಿರಾಟ್ ಕೊಹ್ಲಿಗೆ ಮಹತ್ವದ ಪಂದ್ಯವಾಗಿದ್ದು ಇದು ಅವರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವೃತ್ತಿ ಜೀವನದ 100ನೇ ಪಂದ್ಯವಾಗಿದೆ.

ಈ ಹಿಂದೆ ಪಾಕಿಸ್ತಾನವನ್ನು ಭಾರತ 2021 ರ ಐಸಿಸಿ ಪುರುಷರ T20 ವಿಶ್ವಕಪ್‌ನಲ್ಲಿ ಎದುರುಗೊಂಡಿತ್ತು. ಆಂದಿನ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ಅಲ್ಲದೆ ಭಾರತಕ್ಕೆ ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಟೂರ್ನಿಯಲ್ಲಿ ಅದು ಮೊದಲ ಸೋಲುಕೂಡ ಆಗಿತ್ತು. ಇದೀಗ ಭಾರತಕ್ಕೆ ಆ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ದೊರೆತಿದೆ.

ಈ ಹೈ-ವೋಲ್ಟೇದ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ, ಶಾಹೀನ್ ಅಫ್ರಿದಿ ಮತ್ತು ಹರ್ಷಲ್ ಪಟೇಲ್ ಸೇರಿದಂತೆ ಕೆಲವು ಸ್ಟಾರ್ ಆಟಗಾರರ ಹೆಸರುಗಳು ಕಾಣೆಯಾಗಿರುವುದು ಅಭಿಮಾನಿಗಳಿಗೆ ನಿರಾಸೆ ತಂದಿದೆ. ಪಾಕಿಸ್ತಾನದ ಪರ ನಸೀಮ್ ಶಾ ಭಾರತದ ವಿರುದ್ಧದ ಪಂದ್ಯದ ಮೂಲಕ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ತಂಡ ಇಂತಿದೆ: 
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಯಜುವೇಂದ್ರ ಚಾಹಲ್

ಪಾಕಿಸ್ತಾನ
ಬಾಬರ್ ಅಜಮ್ (ನಾಯಕ), ಮಹಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಅಹ್ಮದ್, ಕೆ ಶಾ, ಎ ಅಲಿ, ಎಂ ನವಾಜ್, ಎಸ್ ಖಾನ್, ಎಸ್ ದಹಾನಿ, ಎಚ್ ರೌಫ್, ಎನ್ ಶಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com