ಏಷ್ಯಾಕಪ್ 2022: ಭಾರತದ ವಿರುದ್ಧ ಟಾಸ್ ಗೆದ್ದ ಹಾಂಗ್ ಕಾಂಗ್ ಫೀಲ್ಡಿಂಗ್ ಆಯ್ಕೆ!

ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ಹಾಂಗ್ ಕಾಂಗ್
ಟಾಸ್ ಗೆದ್ದ ಹಾಂಗ್ ಕಾಂಗ್

ದುಬೈ; ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡದ ನಿಜಾಕತ್ ಖಾನ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೂರ್ನಿಯಲ್ಲಿ ಈಗಾಗಲೇ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ತಂಡ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ಆಗಿದೆ.

ಇನ್ನು ಇಂದಿನ ಪಂದ್ಯದಲ್ಲಿ ಪಾಕ್ ವಿರುದ್ಧದ ಪಂದ್ಯದ ಹೀರೋ ಹಾರ್ದಿಕ್ ಪಾಂಡ್ಯಾಗೆ ವಿಶ್ರಾಂತಿ ನೀಡಲಾಗಿದ್ದು, ಪಾಂಡ್ಯಾ ಬದಲಿಗೆ ರಿಷಬ್ ಪಂತ್ ಗೆ ಸ್ಥಾನ ನೀಡಲಾಗಿದೆ.

14 ವರ್ಷಗಳ ಬಳಿಕ ಭಾರತ vs ಹಾಂಗ್‌ಕಾಂಗ್ ಪಂದ್ಯ
ಭಾರತ ಮತ್ತು ಹಾಂಗ್ ಕಾಂಗ್ ತಂಡಗಳು ಏಷ್ಯಾ ಕಪ್ ಇತಿಹಾಸದಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿವೆ. ಹೌದು, 2008ರ ಏಷ್ಯಾಕಪ್ ಟೂರ್ನಿಯಲ್ಲಿ ಕ್ವಾಲಿಫೈಯರ್ ಗೆದ್ದು ಅರ್ಹತೆ ಗಿಟ್ಟಿಸಿಕೊಂಡಿದ್ದ ಹಾಂಗ್ ಕಾಂಗ್ ಟೀಮ್ ಇಂಡಿಯಾ ವಿರುದ್ಧ ಸೆಣಸಾಟ ನಡೆಸಿತ್ತು. ಇದು ಉಭಯ ತಂಡಗಳ ನಡುವೆ ನಡೆದಿರುವ ಮೊದಲ ಏಷ್ಯಾಕಪ್ ಮುಖಾಮುಖಿಯಾಗಿದೆ. ಈ ಮೂಲಕ ಅಂದು ಕಣಕ್ಕಿಳಿದಿದ್ದ ಉಭಯ ತಂಡಗಳು 14 ವರ್ಷಗಳ ಬಳಿಕ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. 2008ರ ಜೂನ್ 25ರಂದು ಕರಾಚಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಹಾಂಗ್ ಕಾಂಗ್ ಹೀನಾಯ ಸೋಲು ಕಂಡಿತ್ತು.

ತಂಡಗಳು ಇಂತಿವೆ:
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಶ್ ದೀಪ್ ಸಿಂಗ್, ಯಜುವೇಂದ್ರ ಚಹಾಲ್

ಹಾಂಗ್ ಕಾಂಗ್: ಎನ್ ಖಾನ್ (ನಾಯಕ), ವೈ ಮುರ್ತಾಜಾ, ಬಿ ಹಯಾತ್, ಕೆ ಶಾ, ಎ ಖಾನ್, ಎಸ್ ಮೆಕೆಚ್ನಿ (ವಿಕೆಟ್ ಕೀಪರ್), ಝಡ್ ಅಲಿ, ಎಚ್ ಅರ್ಷದ್, ಇ ಖಾನ್, ಎ ಶುಕ್ಲಾ, ಎಂ ಗಜನ್ಫರ್. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com