ಟೀಂ ಇಂಡಿಯಾಗೆ ಆಘಾತ; ಭಾರತ vs ಬಾಂಗ್ಲಾದೇಶ ಏಕದಿನ ಸರಣಿಗೆ ಪಂತ್ ಅಲಭ್ಯ

ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದ್ದು, ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಪ್ ಪಂತ್ ಏಕದಿನ ಸರಣಿಯಿಂದ ದೂರ ಉಳಿದಿದ್ದಾರೆ.
ಪಂತ್
ಪಂತ್

ನವದೆಹಲಿ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದ್ದು, ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ರಿಷಪ್ ಪಂತ್ ಏಕದಿನ ಸರಣಿಯಿಂದ ದೂರ ಉಳಿದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದು ಢಾಕಾದಲ್ಲಿ ಆರಂಭವಾಗಿದ್ದು, ಪಂದ್ಯವಾಡಲು ಕಣಕ್ಕಿಳಿದ ಭಾರತ ತಂಡದಲ್ಲಿ ಹಲವಾರು ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ ತಂಡದ ಪ್ರಮುಖ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಭಾರತ ಏಕದಿನ ತಂಡದಿಂದ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚನೆ ನಡೆಸಿ ರಿಷಬ್ ಪಂತ್ ಅವರನ್ನು ಏಕದಿನ ತಂಡದಿಂದ ಬಿಡುಗಡೆ ಮಾಡಿದೆ. ಟೆಸ್ಟ್ ಸರಣಿಗೂ ಮುನ್ನ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ. ಅವರಿಗೆ ಪರ್ಯಾಯ ಆಟಗಾರನ ನೇಮಕ ಇನ್ನೂ ಆಗಿಲ್ಲ. ಮೊದಲ ODI ಗೆ ಆಯ್ಕೆಗೆ ಅಕ್ಷರ್ ಪಟೇಲ್ ಲಭ್ಯವಿಲ್ಲ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಪಂತ್ ಅಭ್ಯತೆಯ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಆದರೆ ಅಲಭ್ಯತೆಗೆ ನಿರ್ದಿಷ್ಟ ಕಾರಣ ಬಹಿರಂಗಪಡಿಸಿಲ್ಲ. ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಲಾಗಿದೆ ಮತ್ತು ಪಂತ್ ಬದಲಿಗೆ ಯಾರನ್ನೂ ತಂಡಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ. ಡಿಸೆಂಬರ್ 14 ರಂದು ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ಪಂತ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಭಾನುವಾರ ಬೆಳಗ್ಗೆ ಢಾಕಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ಟಾಸ್‌ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ, “ಕೆಲವರಿಗೆ ಗಾಯಗಳಾಗಿವೆ” ಮತ್ತು ಪಂದ್ಯದಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡುತ್ತಾರೆ ಎಂದು ಉಲ್ಲೇಖಿಸಿದ್ದಾರೆ. ಪಂತ್ ಮಾತ್ರವಲ್ಲದೆ ಅಕ್ಷರ್ ಪಟೇಲ್ ಕೂಡಾ ಮೊದಲ ಏಕದಿನ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಹೇಳಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com