ಸರಣಿ ಸೋತರು ವೇಗವಾಗಿ 500 ಸಿಕ್ಸರ್ ಬಾರಿಸಿ ದಾಖಲೆ ಬರೆದ ರೋಹಿತ್ ಶರ್ಮಾ!

ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ ಅಜೇಯ 51 ರನ್ ಗಳಿಸಿ 5 ಸಿಕ್ಸರ್‌ಗಳನ್ನು ಬಾರಿಸಿದರು.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಮೀರ್‌ಪುರ್‌: ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ ಅಜೇಯ 51 ರನ್ ಗಳಿಸಿ 5 ಸಿಕ್ಸರ್‌ಗಳನ್ನು ಬಾರಿಸಿದರು. 

ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಭಾರತೀಯ ನಾಯಕ ಪಾತ್ರರಾದರು. ಈ ವೇಳೆ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗೇಲ್ 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ರೋಹಿತ್ ಶರ್ಮಾ 428ನೇ ಪಂದ್ಯಗಳಲ್ಲಿ 500ನೇ ಸಿಕ್ಸರ್ ಬಾರಿಸಿದ್ದರೆ ಕ್ರಿಸ್ ಗೇಯ್ಲ್ 447 ಪಂದ್ಯಗಳನ್ನು ತೆಗೆದುಕೊಂಡಿದ್ದರು. 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳು
ಕ್ರಿಸ್ ಗೇಲ್ - 553
ರೋಹಿತ್ ಶರ್ಮಾ - 502
ಶಾಹಿದ್ ಅಫ್ರಿದಿ - 476
ಬ್ರೆಂಡನ್ ಮೆಕಲಮ್ - 398

ರೋಹಿತ್ ಟೆಸ್ಟ್‌ನಲ್ಲಿ 64 ಮತ್ತು ಟಿ20ಯಲ್ಲಿ 182 ಸಿಕ್ಸರ್‌ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 238 ಇನ್ನಿಂಗ್ಸ್‌ಗಳಲ್ಲಿ 48ರ ಸರಾಸರಿಯಲ್ಲಿ 9454 ರನ್ ಗಳಿಸಿದ್ದಾರೆ. ಇದರಲ್ಲಿ 29 ಶತಕಗಳು ಮತ್ತು 46 ಅರ್ಧ ಶತಕಗಳು ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com