ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯ: ಕುಲದೀಪ್ ಯಾದವ್ ಟೀಂ ಇಂಡಿಯಾ ಸೇರ್ಪಡೆ

ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕಾಗಿ ಸ್ಪೀನರ್ ಕುಲದೀಪ್ ಯಾದವ್  ಟೀಂ ಇಂಡಿಯಾವನ್ನು ಸೇರ್ಪಡೆಯಾಗಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ತಿಳಿಸಿದೆ.
ಕುಲದೀಪ್ ಯಾದವ್
ಕುಲದೀಪ್ ಯಾದವ್
Updated on

ಮುಂಬೈ: ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕಾಗಿ ಸ್ಪೀನರ್ ಕುಲದೀಪ್ ಯಾದವ್ ಟೀಂ ಇಂಡಿಯಾವನ್ನು ಸೇರ್ಪಡೆಯಾಗಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ತಿಳಿಸಿದೆ. ಬಾಂಗ್ಲಾದೇಶ ಆಯೋಜಿಸಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-2 ಅಂತರದಿಂದ ಹಿನ್ನೆಡೆ ಅನುಭವಿಸಿದೆ.

ಹೆಬ್ಬೆರಳು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನಾಯಕ ರೋಹಿತ್ ಶರ್ಮಾ ತಜ್ಞರ ಸಲಹೆ ಪಡೆಯಲು ಮುಂಬೈಗೆ ಆಗಮಿಸಿದ್ದು, ಅಂತಿಮ ಪಂದ್ಯದಿಂದ ಹೊರಗೆ ಉಳಿಯಲಿದ್ದಾರೆ. ಟೆಸ್ಟ್ ಸರಣಿಗೆ ಅವರನ್ನು ಕರೆಯುವ ಬಗ್ಗೆ ನಂತರ ತೀರ್ಮಾನಿಸಲಾಗುವುದು ಎಂದು ಬಿಸಿಸಿಐ ಹೇಳಿಕೆಯಲ್ಲಿತಿಳಿಸಿದೆ.

ವೇಗಿ ಕುಲದೀಪ್ ಸೇನ್ ಹಾಗೂ ದೀಪಕ್ ಚಹಾರ್ ಕೂಡಾ ಗಾಯದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅಂತಿಮ ಪಂದ್ಯಕ್ಕೆ ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಬಿಸಿಸಿಐ ಸೇರ್ಪಡೆಗೊಳಿಸಿದೆ. 

ಬಾಂಗ್ಲಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಇಂತಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್, ಶಹಬಾಜ್ ಅಹ್ಮದ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲ್ಲಿಕ್ ಮತ್ತು ಕುಲದೀಪ್ ಯಾದವ್.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com