ಬಾಂಗ್ಲಾದೇಶ ಟೆಸ್ಟ್ ಸರಣಿ: 12 ವರ್ಷಗಳ ಬಳಿಕ ಕಮ್ ಬ್ಯಾಕ್, ಕಿರಿಯರಿಗೂ ಸ್ಪೂರ್ತಿಯಾದ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಸಾಧನೆ!

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದ್ದು, ಆ ಮೂಲಕ ಬರೊಬ್ಬರಿ 12 ವರ್ಷಗಳ ಬಳಿಕ ಉನಾದ್ಕತ್ ಮತ್ತೆ ಟೀಂ ಇಂಡಿಯಾ ಪರ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.
ಜಯದೇವ್ ಉನಾದ್ಕತ್
ಜಯದೇವ್ ಉನಾದ್ಕತ್

ಚಟ್ಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದ್ದು, ಆ ಮೂಲಕ ಬರೊಬ್ಬರಿ 12 ವರ್ಷಗಳ ಬಳಿಕ ಉನಾದ್ಕತ್ ಮತ್ತೆ ಟೀಂ ಇಂಡಿಯಾ ಪರ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ಭುಜದ ಗಾಯಕ್ಕೆ ತುತ್ತಾಗಿರುವ ಭಾರತದ ವೇಗಿ ಮಹಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಶಮಿ ಪ್ರಸ್ತುತ ಬೆಂಗಳೂರಿನಲ್ಲಿರುವ ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಭುಜದ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಂಗ್ಲಾದೇಶ ಪ್ರವಾಸದ ಮೊದಲು ತರಬೇತಿ ಅವಧಿಯಲ್ಲಿ ಅವರು ಬಲ ಭುಜದ ಗಾಯಕ್ಕೆ ತುತ್ತಾಗಿದ್ದರು. ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲು ವಿಫಲರಾದ ಕಾರಣ ಶಮಿ ಅವರನ್ನು ಏಕದಿನ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ವೈದ್ಯರ ಸಲಹೆ ಮೇರೆಗೆ ಟೆಸ್ಟ್‌ ಸರಣಿಯಿಂದಲೂ ಅವರನ್ನು ಕೈ ಬಿಡಲಾಗಿದೆ.

ಅವರ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ರಾಜ್‌ಕೋಟ್‌ನಲ್ಲಿರುವ ಜಯದೇವ್ ಉನಾದ್ಕತ್ ಅವರು ತಮ್ಮ ವೀಸಾ ಅವಶ್ಯಕತೆಗಳನ್ನು ಪೂರ್ಣಗೊಳಿಸಲು ಕಾಯುತ್ತಿದ್ದಾರೆ ಮತ್ತು ಮುಂದಿನ ಒಂದೆರಡು ದಿನಗಳಲ್ಲಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಲಿದ್ದು, ಚಟ್ಟೋಗ್ರಾಮ್‌ನಲ್ಲಿ ಟೆಸ್ಟ್ ತಂಡವನ್ನು ಸೇರುವ ಸಾಧ್ಯತೆಯಿದೆ. ಅವರು ಇತ್ತೀಚೆಗೆ ಸೌರಾಷ್ಟ್ರವನ್ನು ವಿಜಯ್ ಹಜಾರೆ ಪ್ರಶಸ್ತಿಗೆ ಮುನ್ನಡೆಸಿದ್ದರು.

12 ವರ್ಷಗಳ ಬಳಿಕ ಕಮ್ ಬ್ಯಾಕ್
ಬಾಂಗ್ಲಾದೇಶ ಸರಣಿ ಮೂಲಕ ಬರೊಬ್ಬರಿ 12 ವರ್ಷಗಳ ಬಳಿಕ ಉನಾದ್ಕತ್ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡುತ್ತಿದ್ದು, ಉನಾದ್ಕತ್ ತಮ್ಮ ಏಕೈಕ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು 2010ರಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಂಚೂರಿಯನ್‌ನಲ್ಲಿ ಆಡಿದ್ದರು. ಅದಾದ ಬಳಿಕ 7 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅವಕಾಶ ಪಡೆದುಕೊಂಡ ಇವರು 10 ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದರು. ಆದರೆ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಭದ್ರಪಡಿಸಲು ಸಾಧ್ಯವಾಗಿರಲಿಲ್ಲ.

ತಂಡಕ್ಕೆ ಸೇರ್ಪಡೆಯಾಗುತ್ತಿರುವ 2ನೇ ಬದಲೀ ಆಟಗಾರ
ಇನ್ನು ಹಾಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಉನಾದ್ಕತ್ ತಂಡಕ್ಕೆ ಸೇರ್ಪಡೆಯಾಗುತ್ತಿರುವ 2ನೇ ಆಟಗಾರರಾಗಿದ್ದಾರೆ. ಈ ಹಿಂದೆ 2ನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ನಾಯಕ ರೋಹಿತ್ ಶರ್ಮಾ ಅವರ ಬದಲಿಗೆ ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಕೂಡ ರವೀಂದ್ರ ಜಡೇಜಾಗೆ ಸಂಭಾವ್ಯ ಬದಲಿ ಆಟಗಾರನಾಗಿದ್ದಾರೆ. ಇದೀಗ ಉನಾದ್ಕತ್ ಶಮಿ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಉನಾದ್ಕತ್
ಜಯ್‌ದೇವ್ ಉನಾದ್ಕಟ್ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದು ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಸೌರಾಷ್ಟ್ರ ತಂಡದ ನಾಯಕನಾಗಿ ಮುನ್ನಡೆಸುತ್ತಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಆವೃತ್ತಿಯ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 19 ವಿಕೆಟ್ ಪಡೆದು ಮಿಂಚಿದ್ದಾರೆ. ಸದ್ಯ ರಾಜ್‌ಕೋಟ್‌ನಲ್ಲಿದ್ದು ವಿಸಾ ಪ್ರಕ್ರಿಯೆ ಮುಗಿದ ಬಳಿಕ ಬಾಂಗ್ಲಾದೇಶಕ್ಕೆ ಪ್ರಯಾಣಿಸಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಮೊಹಮ್ಮದ್ ಶಮಿ ಭುಜದ ನೋವಿಗೆ ತುತ್ತಾದ ಕಾರಣ ಈ ಸರಣಿಯಿಂದ ಹೊರಗುಳಿದಿದ್ದು ಉನಾದ್ಕಟ್‌ಗೆ ಇದು ಸುದೀರ್ಘ ಕಾಲದ ಬಳಿಕ ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ಅವಕಾಶ ದೊರೆಯಲು ಕಾರಣವಾಗಿದೆ.

ಭಾರತಕ್ಕೆ ಮಹತ್ವದ ಸರಣಿ
ಡಿಸೆಂಬರ್ 14 ಬುಧವಾರದಿಂದ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಏಕದಿನ ಸರಣಿಯನ್ನು ಕಳೆದುಕೊಂಡಿರುವ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ದೃಷ್ಟಿಯಿಂದಲೂ ಭಾರತಕ್ಕೆ ಈ ಸರಣಿ ಬಹಳ ಮಹತ್ವದ್ದಾಗಿದೆ. ಈ ಸರಣಿಗೆ ಮುನ್ನ ಟೀಮ್ ಇಂಡಿಯಾ ಕೆಲ ಗಾಯದ ಸಮಸ್ಯೆಯಿಂದ ಬಳಲುತ್ತಿದೆ. ಬೌಲಿಂಗ್‌ನಲ್ಲಿ ಅನುಭವಿ ಆಟಗಾರ ಮೊಹಮ್ಮದ್ ಶಮಿ ಗಾಯದ ಬೆನ್ನು ನೋವಿನ ಕಾರಣ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದರು. ಯುವ ವೇಗಿ ಉಮ್ರಾನ್ ಮಲಿಕ್ ಏಕದಿನ ಮಾದರಿಯಲ್ಲಿ ಬದಲಿ ಆಟಗಾರನಾಗಿ ಅವಕಾಶ ಪಡೆದುಕೊಂಡಿದ್ದರು. ಇದೀಗ ಟೆಸ್ಟ್ ಸರಣಿಗೂ ಬದಲಿ ಆಟಗಾರನಾದಿ ಉನಾದ್ಕತ್ ಗೆ ಅವಕಾಶ ಕಲ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com