ಮೊದಲ ಟೆಸ್ಟ್: ಗಿಲ್, ಪೂಜಾರ ಶತಕ: 513 ರನ್ ಟಾರ್ಗೆಟ್ ನೀಡಿದ ಭಾರತ, ದಿನದಾಟದಂತ್ಯಕ್ಕೆ ಬಾಂಗ್ಲಾ 42/0

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಚಟ್ಟೋಗ್ರಾಮ್‌ನಲ್ಲಿ ನಡೆಯುತ್ತಿದೆ. ಮೂರನೇ ದಿನದ ಆಟ ಮುಗಿದಿದ್ದು ಭಾರತ ಮೊದಲ ಇನಿಂಗ್ಸ್‌ನಲ್ಲಿ 404 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡವನ್ನು 150 ರನ್‌ಗಳಿಗೆ ಕಟ್ಟಿಹಾಕಲಾಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಚಟ್ಟೋಗ್ರಾಮ್‌ನಲ್ಲಿ ನಡೆಯುತ್ತಿದೆ. ಮೂರನೇ ದಿನದ ಆಟ ಮುಗಿದಿದ್ದು ಭಾರತ ಮೊದಲ ಇನಿಂಗ್ಸ್‌ನಲ್ಲಿ 404 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡವನ್ನು 150 ರನ್‌ಗಳಿಗೆ ಕಟ್ಟಿಹಾಕಲಾಯಿತು. 

ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 258 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದು, ಬಾಂಗ್ಲಾದೇಶಗೆ 513 ರನ್ ಗಳ ಗುರಿ ನೀಡಿದೆ. ಇದಕ್ಕೆ ಉತ್ತರವಾಗಿ ಮೂರನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ ಯಾವುದೇ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ. ಭಾರತ 471 ರನ್‌ಗಳ ಮುನ್ನಡೆ ಸಾಧಿಸಿದ್ದು, ಗೆಲುವಿಗೆ 10 ವಿಕೆಟ್‌ಗಳ ಅಗತ್ಯವಿದೆ. ಪಂದ್ಯಕ್ಕೆ ಎರಡು ದಿನಗಳ ಆಟ ಬಾಕಿ ಇದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 404 ರನ್ ಗಳಿಸಿತ್ತು. ಪೂಜಾರ 90, ಶ್ರೇಯಸ್ ಅಯ್ಯರ್ 86 ಮತ್ತು ರವಿಚಂದ್ರನ್ ಅಶ್ವಿನ್ 58 ರನ್ ಗಳಿಸಿ ಔಟಾದರು. ಪಂತ್ ಮತ್ತು ಕುಲದೀಪ್ ಕೂಡ ಉತ್ತಮ ಕೊಡುಗೆ ನೀಡಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ ಮತ್ತು ಮೆಹದಿ ಹಸನ್ ಮಿರಾಜ್ ತಲಾ ನಾಲ್ಕು ವಿಕೆಟ್ ಪಡೆದರು.

ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ ಕೇವಲ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಮುಶ್ಫಿಕರ್ ರಹೀಮ್ ಅತ್ಯಧಿಕ 28 ಮತ್ತು ಮೆಹದಿ ಹಸನ್ 25 ರನ್ ಗಳಿಸಿದರು. ಭಾರತದ ಪರ ಕುಲದೀಪ್ ಯಾದವ್ ಐದು ಮತ್ತು ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಪಡೆದರು.

ಶುಭಮನ್ ಗಿಲ್ ಅವರ 110 ಮತ್ತು ಚೇತೇಶ್ವರ ಪೂಜಾರ ಅವರ 102 ರನ್‌ಗಳ ನೆರವಿನಿಂದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್‌ಗಳಿಗೆ 258 ರನ್ ಗಳಿಸಿತು. ಪೂಜಾರ ಶತಕದೊಂದಿಗೆ ನಾಯಕ ಕೆಎಲ್ ರಾಹುಲ್ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು. ಎರಡನೇ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶದ ಖಲೀದ್ ಅಹ್ಮದ್ ಮತ್ತು ಮೆಹದಿ ಹಸನ್ ತಲಾ ಒಂದು ವಿಕೆಟ್ ಪಡೆದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com