ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯಾ- ವೆಸ್ಟ್ ಇಂಡೀಸ್ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
Published: 11th February 2022 01:58 PM | Last Updated: 11th February 2022 02:02 PM | A+A A-

ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ಕ್ಯಾಪ್ಟನ್
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯಾ- ವೆಸ್ಟ್ ಇಂಡೀಸ್ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈಗಾಗಲೇ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈ ವಶ ಮಾಡಿಕೊಂಡಿರುವ ಟೀಂ ಇಂಡಿಯಾ, ಸರಣಿ ಕ್ಲೀನ್ ಸ್ವೀಪ್ ನತ್ತ ಚಿತ್ತ ನೆಟ್ಟಿದ್ದರೆ, ವೈಟ್ ವಾಶ್ ಮುಖಭಂಗದಿಂದ ಪಾರಾಗಲು ವೀಂಡಿಸ್ ತಂಡ ಎದುರು ನೋಡುತ್ತಿದೆ.
ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ) ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಸೂರ್ಯ ಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
ವೆಸ್ಟ್ ಇಂಡೀಸ್ ತಂಡ ಇಂತಿದೆ: ಶಾಯ್ ಹೋಪ್, ಬ್ರೆಂಡನ್ ಕಿಂಗ್, ಡ್ಯಾರನ್ ಬ್ರಾವೋ, ಸಮರ್ಥ್ ಬ್ರೂಕ್ಸ್, ನಿಕೋಲ್ ಪೂರನ್, ಜೀಸನ್ ಹೋಲ್ಡರ್, ಒಡೆನ್ ಸ್ಮಿತ್ ಫ್ಯಾಬಿನ್, ಆ್ಯಲೆನ್ , ಹೇಡನ್ ವಾಲ್ಡ್, ಅಲ್ಜೆರಿ ಜೋಸೆಫ್, ಕೀಮಾರ್ ಕೋಚ್.