ಶ್ರೀಲಂಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್!!
ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದಾರೆ.
Published: 23rd February 2022 12:06 PM | Last Updated: 23rd February 2022 12:58 PM | A+A A-

ಸೂರ್ಯ ಕುಮಾರ್ ಯಾದವ್ ಮತ್ತು ದೀಪಕ್ ಚಹರ್
ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದಾರೆ.
ಹೌದು... ನಾಳೆಯಿಂದ ಅಂದರೆ ಫೆಬ್ರವರಿ 24 ರಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಟಿ20 ಸರಣಿ ಲಕ್ನೋದಲ್ಲಿ ಆರಂಭವಾಗಲಿದೆ. ತಂಡದ ಪ್ರಮುಖ ಆಟಗಾರರಾದ ಸೂರ್ಯ ಕುಮಾರ್ ಯಾದವ್ ಮತ್ತು ಆಲ್ ರೌಂಡರ್ ದೀಪಕ್ ಚಹರ್ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದ ಗೆಲುವಿನ ಹೀರೋ ಆಗಿದ್ದ ಸೂರ್ಯಕುಮಾರ್ ಯಾದವ್ ಕೈಯಲ್ಲಿ ಹೇರ್ಲೈನ್ ಫ್ರ್ಯಾಕ್ಚರ್ ಆಗಿರುವ ಕಾರಣ ಇದೀಗ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ದೀಪಕ್ ಚಹರ್ ಕೂಡ ಔಟ್
ಇನ್ನು ಸ್ಟಾರ್ ಆಲ್ ರೌಂಡರ್ ದೀಪಕ್ ಚಹರ್ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದು, ಚಹರ್ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದರು. ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟಿ20 ಪಂದ್ಯದ ವೇಳೆ ಚಹಾರ್ ಗಾಯಗೊಂಡಿದ್ದರು. ಪಂದ್ಯದ ಎರಡನೇ ಓವರ್ ಬೌಲಿಂಗ್ ಮಾಡುವಾಗ ಚಹರ್ ಬಲ ತೊಡೆಯ ಸ್ನಾಯು ಸೆಳೆತದಿಂದ ಮೈದಾನವನ್ನು ಹೊರನಡೆದಿದ್ದರು. ವೈದ್ಯರ ಪರೀಕ್ಷೆಯ ನಂತರ ಗಾಯದ ತೀವ್ರತೆ ಹೆಚ್ಚಿದೆ ಎಂದು ತಿಳಿದುಬಂದಿದೆ. ಚೇತರಿಸಿಕೊಳ್ಳಲು 5-6 ವಾರಗಳು ತೆಗೆದುಕೊಳ್ಳಬಹುದು ಎಂಬ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾ ತಂಡದಲ್ಲಿ ಮಹತ್ವದ ಬೆಳವಣಿಗೆ, ಬೌಲಿಂಗ್ ಕೋಚ್ ಆಗಿ ಲಸಿತ್ ಮಾಲಿಂಗ ಆಯ್ಕೆ ಸಾಧ್ಯತೆ
ಸದ್ಯ ಈ ಸುದ್ದಿಯ ತಿಳಿಯುತ್ತಿದ್ದಂತೆ ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ದಿಗ್ಭ್ರಮೆಗೊಂಡಿದೆ. ಇತ್ತೀಚೆಗಷ್ಟೇ ನಡೆದ ಐಪಿಎಲ್ ಹರಾಜಿನಲ್ಲಿ ಚಹರ್ ಅವರನ್ನು 14 ಕೋಟಿ ರೂಪಾಯಿಗೆ CSK ಖರೀದಿಸಿತ್ತು ಈಗ ಇವರ ಆರೋಗ್ಯ ಪರಿಸ್ಥಿತಿ ತಿಳಿದು ಚಿಂತೆಗೊಳಗಾಗಿದೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಯು ಫೆಬ್ರವರಿ 24 ರಂದು ಪ್ರಾರಂಭವಾಗಲಿದೆ. ಮೊದಲ ಟಿ20 ಲಕ್ನೋದಲ್ಲಿ ನಡೆಯಲಿದ್ದು, ಫೆಬ್ರವರಿ 26 ಮತ್ತು 27 ರಂದು ಧರ್ಮಶಾಲಾದಲ್ಲಿ ಎರಡು ಮತ್ತು ಮೂರನೇ ಟಿ20 ಪಂದ್ಯಗಳು ನಡೆಯಲಿವೆ. ಮೊದಲ ಟೆಸ್ಟ್ ಮಾರ್ಚ್ 4-8 ರಂದು ಮೊಹಾಲಿಯಲ್ಲಿ ಮತ್ತು ಎರಡನೇ ಟೆಸ್ಟ್ (ಹಗಲು ಮತ್ತು ರಾತ್ರಿ) ಮಾರ್ಚ್ 12-16 ರಂದು ಬೆಂಗಳೂರಿನಲ್ಲಿ ನಡೆಯಲಿದೆ.