5ನೇ ಟೆಸ್ಟ್: ಎರಡನೇ ದಿನದಾಟಕ್ಕೆ ಇಂಗ್ಲೆಂಡ್ 5 ವಿಕೆಟ್ ಪತನ, 84 ರನ್: 332 ರನ್ ಹಿನ್ನಡೆ!

ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 84 ರನ್ ಪೇರಿಸಿದ್ದು 332 ರನ್ ಗಳ ಹಿನ್ನಡೆ ಅನುಭವಿಸಿದೆ. 
ಟೀಂ ಇಂಡಿಯಾ ತಂಡ
ಟೀಂ ಇಂಡಿಯಾ ತಂಡ

ಬರ್ಮಿಂಗ್ಹ್ಯಾಮ್: ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 84 ರನ್ ಪೇರಿಸಿದ್ದು 332 ರನ್ ಗಳ ಹಿನ್ನಡೆ ಅನುಭವಿಸಿದೆ. 

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 416 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ್ದ ಇಂಗ್ಲೆಂಡ್ ಓಟಕ್ಕೆ ವೇಗಿ ಜಸ್ ಪ್ರೀತ್ ಬುಮ್ರಾ ಬ್ರೇಕ್ ಹಾಕಿದ್ದಾರೆ. 

ಬುಮ್ರಾ 3 ವಿಕೆಟ್ ಪಡೆದಿದ್ದರೆ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ. ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ಬ್ಯಾಟರ್ ಗಳಾದ ಜಾನಿ ಬೈರ್ಸ್ಟೋವ್ ಅಜೇಯ 12, ಬೆನ್ ಸ್ಟೋಕ್ಸ್ ಅಜೇಯ 0 ಗಳಿಸಿ ಆಡುತ್ತಿದ್ದಾರೆ.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com