5ನೇ ಟೆಸ್ಟ್: ಭಾರತೀಯ ಅಭಿಮಾನಿಗಳ ವಿರುದ್ಧ ಜನಾಂಗೀಯ ನಿಂದನೆ ಆರೋಪ; ವಾರ್ವಿಕ್‌ಷೈರ್, ಇಸಿಬಿಯಿಂದ ತನಿಖೆ!

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್‌ನ ನಾಲ್ಕನೇ ದಿನದಾಟದಂದ ಭಾರತೀಯ ಅಭಿಮಾನಿಗಳನ್ನು ಗುರಿಯಾಗಿಟ್ಟುಕೊಂಡು ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.
ಟೀಂ ಇಂಡಿಯಾ ಆಟಗಾರರು
ಟೀಂ ಇಂಡಿಯಾ ಆಟಗಾರರು

ಬರ್ಮಿಂಗ್‌ಹ್ಯಾಮ್: ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್‌ನ ನಾಲ್ಕನೇ ದಿನದಾಟದಂದ ಭಾರತೀಯ ಅಭಿಮಾನಿಗಳನ್ನು ಗುರಿಯಾಗಿಟ್ಟುಕೊಂಡು ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಇಸಿಬಿ ಮತ್ತು ವಾರ್ವಿಕ್‌ಶೈರ್ ಕೌಂಟಿ ಕ್ರಿಕೆಟ್ ಕ್ಲಬ್ ತಿಳಿಸಿದೆ.

ಇನ್ನು ಮೂರನೇ ದಿನದಾಟದ ವೇಳೆ ಮೈದಾನದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಮತ್ತು ಇಂಗ್ಲೆಂಡ್ ನ ಜಾನಿ ಬೈರ್ಸ್ಟೋವ್ ಕಿತ್ತಾಡಿಕೊಂಡಿದ್ದರು. ಇದಾದ ನಂತರ ನಾಲ್ಕನೇ ದಿನದಾಟದಂದು ಪ್ರೇಕ್ಷಕರ ಗ್ಯಾಲರಿಯಲ್ಲಿ ಇಂಗ್ಲೆಂಡ್ ಅಭಿಮಾನಿಗಳು ಭಾರತೀಯ ಕ್ರಿಕೆಟ್ ಅಭಿಮಾನಿಗಳ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.

ಅಭಿಮಾನಿಯೊಬ್ಬರು ತಮ್ಮ ಭಾರತೀಯ ಅಭಿಮಾನಿಗಳ ವಿರುದ್ಧ 10ಕ್ಕೂ ಹೆಚ್ಚು ಬಾರಿ ಜನಾಂಗೀಯ ನಿಂದನೆ ಮಾಡಿದ್ದರು. ಈ ಬಗ್ಗೆ ಸ್ಟೇಡಿಯಂ ಸಿಬ್ಬಂದಿಗೆ ದೂರು ನೀಡಿದರೆ, ನಮ್ಮನ್ನೇ ಆಸನಗಳಲ್ಲಿ ಕೂರಲು ತಿಳಿಸಿದರು ಎಂದು ವಿಡಿಯೋ ಮತ್ತು ಪೋಟೋಗಳನ್ನು ಹಂಚಿಕೊಂಡಿದ್ದು ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತನಿಖೆ ನಡೆಸಿ, ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಕಳವಳವ್ಯಕ್ತಪಡಿಸಿರುವ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ರೀತಿಯ ನಡವಳಿಕೆಗೆ ನಮ್ಮಲ್ಲಿ ಜಾಗವಿಲ್ಲ. ಅತ್ಯಂತ ಸುರಕ್ಷಿತ ವಾತಾವರಣಕ್ಕಾಗಿ ಎಡ್ಜ್ಬಾಸ್ಟನ್ ಕೆಲಸ ಮಾಡಲಿದೆ ಎಂದು ತಿಳಿಸಿದೆ.

ಕಳೆದ ವರ್ಷ ಯಾರ್ಕ್ ಷೈರ್ ಕೌಂಟಿ ಕ್ರಿಕೆಟ್ ಕ್ಲಬ್ ನಲ್ಲಿ ನಡೆದಿದ್ದ ಜನಾಂಗೀಯ ನಿಂದನೆ ವಿರುದ್ಧ ಪಾಕಿಸ್ತಾನ ಮೂಲದ ಕ್ರಿಕೆಟಿಗ ಅಜೀಮ್ ರಫೀಕ್ ಮಾಡಿದ್ದ ಟ್ವೀಟ್ ಗಳನ್ನು ಇದೀಗ ಮತ್ತೆ ಮರುಟ್ವೀಟ್ ಮಾಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com