ಭಾರತ vs ಇಂಗ್ಲೆಂಡ್: ಈ ದಾಖಲೆ ಬರೆದ ಭಾರತದ ಮೊದಲ ಬ್ಯಾಟರ್ ರೋಹಿತ್ ಶರ್ಮಾ!

ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಭಾರತ vs ಇಂಗ್ಲೆಂಡ್: ಈ ದಾಖಲೆ ಬರೆದ ಭಾರತದ ಮೊದಲ ಬ್ಯಾಟರ್ ರೋಹಿತ್ ಶರ್ಮಾ!

ಕೆನ್ನಿಂಗ್ಟನ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಹೌದು.. ಲಂಡನ್ ನ ಕೆನ್ನಿಂಗ್ಟನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ನೀಡಿದ 111 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಭಾರತ ಪರ ಅಜೇಯ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಭರ್ಜರಿ ಸಿಕ್ಸರ್ ಮತ್ತು 6 ಬೌಂಡರಿ ನೆರವಿನಿಂದ ಕೇವಲ 58 ಎಸೆತಗಳಲ್ಲಿ 76 ರನ್ ಚಚ್ಚಿದರು. ರೋಹಿತ್ ಗೆ ಉತ್ತಮ ಸಾಥ್ ನೀಡಿದ ಶಿಖರ್ ಧವನ್ ಕೂಡ 4 ಬೌಂಡರಿ ಸಹಿತ 31 ರನ್ ಕಲೆ ಹಾಕಿದರು.

ಈ ಭರ್ಜರಿ ಬ್ಯಾಟಿಂಗ್ ಮೂಲಕ ರೋಹಿತ್ ಶರ್ಮಾ ಭಾರತದ ಪರ ಅತೀ ಹೆಚ್ಚು ಅಂದರೆ 250 ಸಿಕ್ಸರ್ ಗಳನ್ನು ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಭಾರತದ ಇನ್ನಿಂಗ್ಸ್ ನ 19ನೇ ಓವರ್ ನಲ್ಲಿ ಇಂಗ್ಲೆಂಡ್ ವೇಗಿ ಬ್ರೈಡನ್ ಕಾರ್ಸೆ ಎಸೆದ 2ನೇ ಎಸೆತವನ್ನು ರೋಹಿತ್ ಶರ್ಮಾ ಫೈನ್ ಲೆಗ್ ನತ್ತ ಹುಕ್ ಮಾಡಿ ಭರ್ಜರಿ ಸಿಕ್ಸರ್ ಗಿಟ್ಟಿಸಿದರು. ಇದು ಅವರ ಏಕದಿನ ವೃತ್ತಿ ಜೀವನದ 250ನೇ ಸಿಕ್ಸರ್ ಆಗಿತ್ತು. ಆ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಅಂತೆಯೇ ಏಕದಿನದಲ್ಲಿ ಅತೀ ಹೆಚ್ಚು ಸಿಕ್ಸರ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ 4ನೇ ಸ್ಥಾನದಲ್ಲಿದ್ದು, 351 ಸಿಕ್ಸರ್ ಸಿಡಿಸಿರುವ ಪಾಕಿಸ್ತಾನದ ಶಾಹಿದ್ ಅಫ್ರಿದಿ, 331 ಸಿಕ್ಸರ್ ಸಿಡಿಸಿರುವ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ ಮತ್ತು 270 ಸಿಕ್ಸರ್ ಸಿಡಿಸಿರುವ ಶ್ರೀಲಂಕಾದ ಸನತ್ ಜಯಸೂರ್ಯ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದ್ದಾರೆ.

ಇನ್ನು ನಿನ್ನೆ ಇಂಗ್ಲೆಂಡ್ ನೀಡಿದ 111 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದ್ದರು. ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ಎಲ್ಲಾ ಹಂತದಲ್ಲೂ ಇಂಗ್ಲೆಂಡ್ ಬೌಲರ್​ಗಳ ವಿರುದ್ದ ಮೇಲುಗೈ ಸಾಧಿಸಿದರು. ಅದರಂತೆ ರೋಹಿತ್ ಶರ್ಮಾ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಶಿಖರ್ ಧವನ್ ಉತ್ತಮ ಸಾಥ್ ನೀಡಿದರು.

ಅಂತಿಮವಾಗಿ ರೋಹಿತ್ ಶರ್ಜಾ ಅಜೇಯ 76 (58) ರನ್​ ಬಾರಿಸಿದರೆ, ಶಿಖರ್ ಧವನ್ ಅಜೇಯ 31 (54) ರನ್ ಕಲೆಹಾಕಿದರು. ಪರಿಣಾಮ 18.4 ಓವರ್​ಗಳಲ್ಲಿ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 114 ರನ್​ ಬಾರಿಸುವ ಮೂಲಕ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com