ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್-ಧವನ್ 5,000 ರನ್‌ ಜೊತೆಯಾಟ; ಈ ಸಾಧನೆ ಮಾಡಿದ 4ನೇ ಜೋಡಿ

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅಜೇಯ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ತಂದಿದ್ದ ನಾಯಕ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.
ರೋಹಿತ್ ಶರ್ಮಾ-ಶಿಖರ್ ಧವನ್
ರೋಹಿತ್ ಶರ್ಮಾ-ಶಿಖರ್ ಧವನ್

ಲಂಡನ್: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅಜೇಯ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ತಂದಿದ್ದ ನಾಯಕ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

ಲಂಡನ್‌ನ ಕೆನ್ನಿಂಗ್ಟನ್ ಓವಲ್‌ ಮೈದಾನದಲ್ಲಿ ನಡೆದ ಭಾರತ-ಇಂಗ್ಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ-ಶಿಖರ್ ಧವನ್ ಜೋಡಿ ಮತ್ತೆ ದಾಖಲೆಯ ಜೊತೆಯಾಟವಾಡಿದ್ದು,  ಏಕದಿನ ಕ್ರಿಕೆಟ್‌ನಲ್ಲಿ ಬೆಸ್ಟ್ ಜೋಡಿಗಳಲ್ಲಿ ಒಂದಾದ ರೋಹಿತ್ ಹಾಗೂ ಧವನ್ ದಾಖಲೆಯ ಮೈಲುಗಲ್ಲು ತಲುಪಿದ್ದಾರೆ.

ಇಂಗ್ಲೆಂಡ್ ನೀಡಿದ್ದ 111ರನ್‌ಗಳ ಗುರಿ ಬೆನ್ನತ್ತಿದ ಭಾರತವು, ಮೊದಲ ವಿಕೆಟ್‌ಗೆ ಉತ್ತಮ ಜೊತೆಯಾಟವಾಡಿತು. ಶತಕದ ಜೊತೆಯಾಟವಾಡಿದ ಈ ಜೋಡಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ವಿಕೆಟ್‌ಗೆ 5000ರನ್‌ಗಳ ಪೇರಿಸಿದ ಜೋಡಿ ಎಂಬ ಕೀರ್ತಿಗೆ ಭಾಜನವಾಗಿದೆ.  ಈ ದಾಖಲೆಯ ಮೂಲಕ ರೋಹಿತ್ ಮತ್ತು ಧವನ್ ಏಕದಿನ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ ಭಾರತದ ಎರಡನೇ ಆರಂಭಿಕ ಜೋಡಿಯಾಗಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದರು.

ಇದರ ಜೊತೆಗೆ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿ ಏಕದಿನ ಕ್ರಿಕೆಟ್‌ನಲ್ಲಿ 18ನೇ ಬಾರಿಗೆ ಶತಕದ ಜೊತೆಯಾಟವಾಡಿದ್ದು, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟವಾಡಿದ ಮೂರನೇ ಜೋಡಿ ಇದಾಗಿದೆ.

ಒಡಿಐನಲ್ಲಿ ಮೊದಲ ವಿಕೆಟ್‌ಗೆ ಅತಿ ಹೆಚ್ಚು ರನ್‌ಗಳ ಜೊತೆಯಾಟ ಈ ಕೆಳಗಿದೆ
6609 ಸಚಿನ್ ತೆಂಡೂಲ್ಕರ್ - ಸೌರವ್‌ ಗಂಗೂಲಿ (ಭಾರತ)
5372 ಆ್ಯಡಂ ಗಿಲ್‌ಕ್ರಿಸ್ಟ್ - ಮ್ಯಾಥ್ಯೂ ಹೇಡನ್ (ಆಸ್ಟ್ರೇಲಿಯಾ)
5150 ಡೆಸ್ಮಾಂಡ್ ಹೇನ್ಸ್ - ಜಿ ಗ್ರೀನಿಡ್ಜ್ (ವೆಸ್ಟ್ ಇಂಡೀಸ್)
5108 ರೋಹಿತ್ ಶರ್ಮಾ - ಶಿಖರ್ ಧವನ್ (ಭಾರತ)

ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 111 ರನ್‌ಗಳ ಸುಲಭ ಸವಾಲು ಪಡೆದ ಭಾರತ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅಜೇಯವಾಗುಳಿದು ಗುರಿ ಮುಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಸ್ಪೋಟಕವಾಗಿಯೇ ಬ್ಯಾಟಿಂಗ್ ನಡೆಸಿದರು. ಕೇವಲ 58 ಎಸೆತಗಳಲ್ಲಿ 76 ರನ್‌ಗಳಿಸಿದ ಶರ್ಮಾ 7 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿದ್ದಾರೆ. ಮತ್ತೊಂದು ತುದಿಯಲ್ಲಿದ್ದ ಧವನ್ 31 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಕೇವಲ 18.4 ಓವರ್‌ಗಳಲ್ಲಿಯೇ ಭಾರತ ಗುರಿ ತಲುಪಿತು.

5000 ರನ್‌ಗಳ ಜೊತೆಯಾಟ
ಇನ್ನು ಭಾರತದ ಆರಂಭಿಕ ಜೋಡಿಯಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಏಕದಿನ ಮಾದರಿಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿದ್ದಾರೆ. ಆರಂಬಿಕರಾಗಿ ಈ ಆಟಗಾರರು 5000 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ದಿಗ್ಗಜ ಜೋಡಿಯಾದ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಬಳಿಕ ಈ ಸಾಧನೆ ಮಾಡಿದ ಕೇವಲ ಎರಡನೇ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ. ಇನ್ನು ಒಟ್ಟಾರೆಯಾಗಿ ಆರಂಭಿಕ ಜೊತೆಯಾಟದಲ್ಲಿ ಅತಿ ಹೆಚ್ಚು ರನ್‌ಗಳ ಜೊತೆಯಾಟ ನಡೆಸಿದ ಆಟಗಾರರ ಪಟ್ಟಿಯಲ್ಲಿಯೂ ರೋಹಿತ್-ಧವನ್ ಜೊಡಿ ಈಗ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com