ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟ: ವಿರಾಟ್ ಕೊಹ್ಲಿಗೆ ವಿಶ್ರಾಂತಿ

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ಹಿರಿಯ ಆಯ್ಕೆ ಸಮಿತಿ ಗುರುವಾರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ಹಿರಿಯ ಆಯ್ಕೆ ಸಮಿತಿ ಗುರುವಾರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದು, ಅವರ ಸೇರ್ಪಡೆ ಫಿಟ್‌ನೆಸ್‌ ಮೇಲೆ ಅವಲಂಬಿತವಾಗಿರುತ್ತದೆ. ಕುಲದೀಪ್ ಯಾದವ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದು, ಅವರೂ ಫಿಟ್ ಆದ ನಂತರವೇ ತಂಡಕ್ಕೆ ಮರಳಲಿದ್ದಾರೆ.

ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಟಿ 20 ತಂಡದ ಭಾಗವಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಯು ಜುಲೈ 29 ರಂದು ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಜುಲೈ 22 ರಿಂದ ಪ್ರಾರಂಭವಾಗುವ ಮೂರು ಏಕದಿನ ಪಂದ್ಯಗಳನ್ನು ಸಹ ಆಡಲಾಗುತ್ತದೆ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಹೆಸರಿಸಲಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಉಮ್ರಾನ್ ಮಲಿಕ್ ತಂಡದ ಭಾಗವಾಗಿಲ್ಲ ಆದರೆ ಅರ್ಶ್ದೀಪ್ ಸಿಂಗ್ ತಂಡದ ಭಾಗವಾಗಿದ್ದಾರೆ.

ಅಕ್ಟೋಬರ್ ನವೆಂಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್‌ಗಾಗಿ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿರುವಾಗ, ಅವರು ಪಡೆಯುವ ಅವಕಾಶಗಳ ಆಧಾರದ ಮೇಲೆ ಯುವ ಆಟಗಾರರಾದ ದೀಪಕ್ ಹೂಡಾ, ಅವೇಶ್ ಖಾನ್ ಮತ್ತು ಅರ್ಶ್‌ದೀಪ್ ಸಿಂಗ್ ಅವರ ಪ್ರದರ್ಶನಗಳ ಮೇಲೆ ಎಲ್ಲರ ಕಣ್ಣುಗಳು ಇರುತ್ತವೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com