3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ; ಅಪರೂಪದ ದಾಖಲೆ ಬರೆದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್

ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ರಿಷಬ್ ಪಂತ್
ರಿಷಬ್ ಪಂತ್

ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ರಿಷಬ್ ಪಂತ್ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಮತ್ತು ಏಕದಿನ ಶತಕಗಳನ್ನು ಗಳಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್-ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ರಿಷಬ್ ಪಂತ್ ಅವರ ಅಜೇಯ 125* ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗಿನ ಅವರ 133 ರನ್‌ಗಳ ಜೊತೆಯಾಟವು ಮ್ಯಾಂಚೆಸ್ಟರ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಅಂತಿಮ ODI ನಲ್ಲಿ ಭಾರತ 260 ರನ್ ಗಳನ್ನು ಯಶಸ್ವಿಯಾಗಿ ಬೆನ್ನಟ್ಟಲು ಸಹಾಯ ಮಾಡಿತು ಮತ್ತು ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.

ಭಾರತದ ರಿಷಬ್ ಪಂತ್ ಅವರು ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಮತ್ತು ಏಕದಿನ ಎರಡರಲ್ಲೂ ಶತಕ ದಾಖಲಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್-ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ, ಏಷ್ಯಾದ ಹೊರಗೆ ಏಕದಿನ ಮಾದರಿಯಲ್ಲಿ ಶತಕ ಗಳಿಸಿದ ರಾಹುಲ್ ದ್ರಾವಿಡ್ ಮತ್ತು ಕೆಎಲ್ ರಾಹುಲ್ ಅವರಂತಹ ವಿಕೆಟ್ ಕೀಪರ್-ಬ್ಯಾಟರ್‌ಗಳ ಪಟ್ಟಿಗೆ ಇದೀಗ ಪಂತ್ ಸೇರಿಕೊಂಡಿದ್ದಾರೆ.

ಇದಕ್ಕೂ ಮೊದಲು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಭಾರತದ ಹಾರ್ದಿಕ್ ಪಾಂಡ್ಯ (4/24) ಮತ್ತು ಯುಜುವೇಂದ್ರ ಚಾಹಲ್ (3/60) ಅವರ ಅದ್ಭುತ ಸ್ಪೆಲ್‌ಗಳಿಗೆ ತತ್ತರಿಸಿ 259 ಕ್ಕೆ ಆಲೌಟ್ ಆಯಿತು. ಜೋಸ್ ಬಟ್ಲರ್ (60), ಜೇಸನ್ ರಾಯ್ (41) ಮತ್ತು ಮೊಯಿನ್ ಅಲಿ (34) ಆತಿಥೇಯರ ಪರವಾಗಿ ಕೆಲವು ನಿರ್ಣಾಯಕ ರನ್ ಗಳನ್ನು ಕಲೆಹಾಕಿದರು. ಇಂಗ್ಲೆಂಡ್ ನೀಡಿದ 260 ರನ್‌ಗಳನ್ನು ಬೆನ್ನಟ್ಟಿದ ಭಾರತಕ್ಕೆ ರೀಸ್ ಟೋಪ್ಲೆ ಆರಂಭದಲ್ಲಿ ಮಾರಣಾಂತಿಕವಾಗಿ ಪರಿಣಮಿಸಿದರು.

ಭಾರತದ ಅಗ್ರ ಕ್ರಮಾಂಕವನ್ನು ಪೆವಿಲಿಯನ್ ಗೆ ಅಟ್ಟಿದ್ಜದರಿಂದ ಭಾರತ ಕೇವಲ 72ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಂತರ ಹಾರ್ದಿಕ್ ಪಾಂಡ್ಯ-ರಿಷಬ್ ಪಂತ್ ಜೋಡಿ 133 ರನ್‌ಗಳ ಅಮೋಘ ಜೊತೆಯಾಟವಾಡಿ ಪಂದ್ಯದ ಗತಿಯನ್ನೇ ಬದಲಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com