ವಿಂಡೀಸ್ ಏಕದಿನ ಸರಣಿಗೆ ಜಡೇಜಾ ಅನುಮಾನ; ಟಿ20 ಸರಣಿಯಲ್ಲಿ ಕೆಎಲ್ ರಾಹುಲ್ ಆಡಲ್ಲ!

ಇಂದಿನಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಸರಣಿಗೆ ರವೀಂದ್ರ ಜಡೇಜಾ ಆಡುವುದು ಅನುಮಾನವಾಗಿದೆ.
ಜಡೇಜಾ-ಕೆಎಲ್ ರಾಹುಲ್
ಜಡೇಜಾ-ಕೆಎಲ್ ರಾಹುಲ್

ಇಂದಿನಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ ಸರಣಿಗೆ ರವೀಂದ್ರ ಜಡೇಜಾ ಆಡುವುದು ಅನುಮಾನವಾಗಿದೆ. ಇದೇ ವೇಳೆ ಕೆಎಲ್ ರಾಹುಲ್ ನಂತರ ಕೆರಿಬಿಯನ್ ಮತ್ತು ಯುಎಸ್‌ನಲ್ಲಿ ನಡೆಯಲಿರುವ T20I ಸರಣಿಯಲ್ಲಿ ಆಡುವುದು ಡೌಟ್ ಆಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಗೆ ಉಪನಾಯಕರಾಗಿ ಆಯ್ಕೆಯಾಗಿರುವ ಜಡೇಜಾ ಅವರ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದು ಅವರ ಗಾಯದ ತೀವ್ರತೆಯನ್ನು ನಿರ್ಧರಿಸಲು ವೈದ್ಯಕೀಯ ಸಲಹೆಯನ್ನು ಪಡೆಯಲಾಗಿದೆ. 

ತಂಡದ ಸ್ಟಾರ್ ಆಲ್‌ರೌಂಡರ್ 33 ವರ್ಷದ ರವೀಂದ್ರ ಜಡೇಜಾಗೆ ಇಡೀ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೂಲಗಳು ಬಹಿರಂಗಪಡಿಸಿವೆ. ಇನ್ನು ಜಡೇಜಾಗೆ ಸೂಕ್ತ ಚಿಕಿತ್ಸೆ ನೀಡಲಾಗವುದು.

ಮೂರು ಏಕದಿನ ಪಂದ್ಯಗಳ ನಂತರ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಆಲ್ರೌಂಡರ್ ಫಿಟ್ ಆಗಬಹುದು ಎಂದು ಮೂಲಗಳು ತಿಳಿಸಿವೆ. ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎಲ್ಲಾ ಏಕದಿನ ಪಂದ್ಯಗಳು ಜುಲೈ 22, 24 ಮತ್ತು 27ರಂದು ನಡೆಯಲಿದೆ.

ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ) ರಿಹ್ಯಾಬ್‌ಗೆ ಒಳಗಾಗಿರುವ ಕೆಎಲ್ ರಾಹುಲ್ ಗೆ ಕೋವಿಡ್-ಪಾಸಿಟಿವ್ ಬಂದಿದೆ. ಹೀಗಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ರಾಹುಲ್ ಆಡುವುದು ಅಸಂಭವ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಹಿರಂಗಪಡಿಸಿದ್ದಾರೆ. ಟ್ರಿನಿಡಾಡ್, ಸೇಂಟ್ ಕಿಟ್ಸ್ ಮತ್ತು ಫ್ಲೋರಿಡಾ(ಅಮೆರಿಕ)-ಮೂರು ಸ್ಥಳಗಳಲ್ಲಿ ಸರಣಿ ಜುಲೈ 29 ರಿಂದ ಆಗಸ್ಟ್ 7ರವರೆಗೆ ನಡೆಯಲಿದೆ.

ಭಾರತ ಏಕದಿನ ತಂಡ: 
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (WK), ಸಂಜು ಸ್ಯಾಮ್ಸನ್ (WK), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಭಾರತ ಟಿ20 ತಂಡ: 
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್* ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com