3ನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ಭರ್ಜರಿ ಗೆಲುವು, ವಿಂಡೀಸ್ ವಿರುದ್ಧ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್
ವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 119 ರನ್ ಗಳ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
Published: 28th July 2022 03:20 AM | Last Updated: 28th July 2022 03:34 AM | A+A A-

ಭಾರತಕ್ಕೆ ಜಯ
ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 119 ರನ್ ಗಳ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ನೀಡಿದ 226 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ವಿಂಡೀಸ್ ವಿರುದ್ಧ 119 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಬಳಿಕ ಬೌಲಿಂಗ್ ಸೇರಿದಂತೆ ಆಲ್ರೌಂಡ್ ಪ್ರದರ್ಶನ ನೀಡಿದ ಭಾರತ ತಂಡ ಮೂರನೇ ಪಂದ್ಯದಲ್ಲಿ ಅರ್ಹವಾಗಿಯೇ ಜಯ ಸಾಧಿಸಿತು.
ಇದನ್ನೂ ಓದಿ: 3ನೇ ಏಕದಿನ: ಮಳೆಯಿಂದ ಪಂದ್ಯ ಸ್ಥಗಿತ, ಶತಕದಂಚಿನಲ್ಲಿ ಗಿಲ್
ಭಾರತ ನೀಡಿದ 226 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಬ್ರಾಂಡನ್ ಕಿಂಗ್ (42 ರನ್), ನಾಯಕ ಪೂರನ್ (42 ರನ್), ಶಾಯ್ ಹೋಪ್ (22) ಮತ್ತು ಹೇಡನ್ ವಾಲ್ಶ್ (10 ರನ್) ಬಿಟ್ಟರೆ ಉಳಿದ ಯಾವ ಬ್ಯಾಟರ್ ನಿಂದಲೂ ಎರಡಂಕಿ ಮೊತ್ತ ಬರಲಿಲ್ಲ. ವಿಂಡೀಸ್ ನಾಲ್ಕು ಬ್ಯಾಟರ್ ಗಳು ಶೂನ್ಯ ಸುತ್ತಿದ್ದರೆ, ಮೂರು ಮಂದಿ ಒಂದಂಕಿ ಮೊತ್ತಕ್ಕೆ ಔಟಾದರು. ಇದು ಭಾರತ ಪ್ರಭಾವಿ ಬೌಲಿಂಗ್ ಮತ್ತು ಫೀಲ್ಡಿಂಗ್ ಸಾಕ್ಷಿಯಾಗಿತ್ತು.
ಇದನ್ನೂ ಓದಿ: ಮಳೆ ಎಫೆಕ್ಟ್: ವಿಂಡೀಸ್ ಗೆ ಗೆಲ್ಲಲು 35 ಓವರ್ ನಲ್ಲಿ 257 ರನ್ ಗಳ ಗುರಿ ನೀಡಿದ ಭಾರತ!
ಅಂತಿಮವಾದಿ ವಿಂಡೀಸ್ ತಂಡ 26 ಓವರ್ ಗಳಲ್ಲಿ ಕೇವಲ 137 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳ ಅಂತರದಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿತು. ಈ ಸೋಲಿನ ಮೂಲಕ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸರಣಿ ಜಯ ಸಾಧಿಸಿದೆ.
ಚೊಚ್ಚಲ ಶತಕ ಮಿಸ್ ಮಾಡಿಕೊಂಡ ಗಿಲ್ ಗೆ ಪಂದ್ಯ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ
ಇನ್ನು ಈ ಪಂದ್ಯದಲ್ಲಿ ಅಜೇಯ 98 ರನ್ ಗಳಿಸಿ ಚೊಚ್ಚಲ ಶತಕ ಮಿಸ್ ಮಾಡಿಕೊಂಡ ಭಾರತದ ಯುವ ಬ್ಯಾಟರ್ ಶುಭ್ ಮನ್ ಗಿಲ್ ಗೆ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.