ಐಸಿಸಿ ಏಕದಿನ ಕ್ರಿಕೆಟ್ ತಂಡ ರ್‍ಯಾಂಕಿಂಗ್: 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡ ಭಾರತ
ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ದಾಖಲೆಯ ವೈಟ್ ವಾಶ್ ಮೂಲಕ ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
Published: 28th July 2022 08:03 PM | Last Updated: 29th July 2022 03:15 PM | A+A A-

ಭಾರತ ತಂಡ
ದುಬೈ: ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ದಾಖಲೆಯ ವೈಟ್ ವಾಶ್ ಮೂಲಕ ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ರ್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದ ಭಾರತ ತಂಡ ಇದೀಗ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ವಿಂಡೀಸ್ ವಿರುದ್ಧದ ಸರಣಿ ಗೆಲುವಿನ ಮೂಲಕ ಭಾರತ ತಂಡ ತನ್ನ ತೆಕ್ಕೆಗೆ ಮತ್ತೊಂದು ಅಂಕ ಹಾಕಿಕೊಂಡಿದ್ದು ಆ ಮೂಲಕ ತನ್ನ ಅಂಕಗಳಿಕೆಯನ್ನು 110ಕ್ಕೇರಿಕೆ ಮಾಡಿಕೊಂಡಿದೆ. ಆ ಮೂಲಕ ತನ್ನ ಮೂರನೇ ಸ್ಥಾನವನ್ನು ಭಾರತ ತಂಡ ಮತ್ತಷ್ಟು ಭದ್ರಪಡಿಸಿಕೊಂಡಿದೆ.
ಇದನ್ನೂ ಓದಿ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಯುಎಇಯಲ್ಲಿ ಏಷ್ಯಾ ಕಪ್ ಆಯೋಜನೆ, ದಿನಾಂಕ ಫಿಕ್ಸ್!
ಭಾರತದ ಸಮೀಪದ ಪ್ರತಿಸ್ಪರ್ಧಿ ಪಾಕಿಸ್ತಾನ 106 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಮುಂದುವರೆದಿದ್ದು, 101 ಅಂಕಗಳೊಂದಿಗೆ ಆಸ್ಟ್ರೇಲಿಯಾ 5ನೇ ಸ್ಥಾನದಲ್ಲಿ ಮುಂದುವರೆದಿದೆ. ಉಳಿದಂತೆ 128 ಅಂಕಗಳೊಂದಿಗೆ ನ್ಯೂಜಿಲೆಂಡ್ ಅಗ್ರ ಸ್ಥಾನದಲ್ಲಿ, 119 ಅಂಕಗಳೊಂದಿಗೆ ಇಂಗ್ಲೆಂಡ್ 2ನೇ ಸ್ಥಾನದಲ್ಲಿ ಮುಂದುವರೆದಿವೆ. 101 ಅಂಕಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ 6, 98 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ 7. 92 ಅಂಕಗಳನ್ನು ಹೊಂದಿರುವ ಶ್ರೀಲಂಕಾ 8 ನೇ ಸ್ಥಾನದಲ್ಲಿವೆ.
ಇದನ್ನೂ ಓದಿ: 3ನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ಭರ್ಜರಿ ಗೆಲುವು, ವಿಂಡೀಸ್ ವಿರುದ್ಧ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್
ದಕ್ಷಿಣ ಆಫ್ರಿಕಾ ವಿರುದ್ಧ ತವರಿನ ಸರಣಿ ಸೇರಿ ಈವರೆಗೆ ಭಾರತ ತಂಡ ಈ ವರ್ಷ ಆಡಿರುವ 9 ಏಕದಿನ ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿದೆ.