
ಟೀಂ ಇಂಡಿಯಾ
ಮುಂಬೈ: ಜಿಂಬಾಬ್ವೆ ಪ್ರವಾಸದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ 15 ಆಟಗಾರರ ಟೀಂ ಇಂಡಿಯಾ ಪ್ರಕಟಿಸಿದೆ.
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಮತ್ತೊಮ್ಮೆ ಭಾರತ ತಂಡಕ್ಕೆ ನಾಯಕತ್ವ ವಹಿಸಲಿದ್ದಾರೆ. ಈ ಸರಣಿಯಿಂದ ದೊಡ್ಡ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಹಾರ್ದಿಕ್ ಪಾಂಡ್ಯ ಮತ್ತು ಮೊಹಮ್ಮದ್ ಶಮಿ ತಂಡಕ್ಕೆ ಆಯ್ಕೆಯಾಗಿಲ್ಲ. ಧವನ್ ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧದ ODI ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು. ಕೆರಿಬಿಯನ್ ನೆಲದಲ್ಲಿ ಮೊದಲ ಬಾರಿಗೆ ಏಕದಿನ ಸರಣಿಯಲ್ಲಿ 3-0 ಕ್ಲೀನ್ ಸ್ವೀಪ್ ಮಾಡಿದರು.
ವೇಗದ ಬೌಲರ್ ದೀಪಕ್ ಚಹಾರ್ ಜಿಂಬಾಬ್ವೆ ಪ್ರವಾಸಕ್ಕಾಗಿ ಏಕದಿನ ತಂಡಕ್ಕೆ ಮರಳಿದ್ದು ಐಪಿಎಲ್ 2022ರ ಸಮಯದಲ್ಲಿ ಗಾಯಗೊಂಡಿದ್ದರು. ಇವರಲ್ಲದೆ, ರಿತುರಾಜ್ ಗಾಯಕ್ವಾಡ್ ಮತ್ತು ರಾಹುಲ್ ತ್ರಿಪಾಠಿ ಅವರಂತಹ ಆಟಗಾರರು ಸಹ ಏಕದಿನ ತಂಡಕ್ಕೆ ಮರಳಿದ್ದಾರೆ. ಭಾರತ ಆಗಸ್ಟ್ 18ರಿಂದ 22ರವರೆಗೆ ಜಿಂಬಾಬ್ವೆ ಪ್ರವಾಸದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.
ಟೀಂ ಇಂಡಿಯಾ ಏಕದಿನ ತಂಡ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.
#TeamIndia for 3 ODIs against Zimbabwe: Shikhar Dhawan (Capt), Ruturaj Gaikwad, Shubman Gill, Deepak Hooda, Rahul Tripathi, Ishan Kishan (wk), Sanju Samson (wk), Washington Sundar, Shardul Thakur, Kuldeep Yadav, Axar Patel, Avesh Khan, Prasidh Krishna, Mohd Siraj, Deepak Chahar.
— BCCI (@BCCI) July 30, 2022