5ನೇ ಟಿ20 ಪಂದ್ಯ: ಸರಣಿ ನಿರ್ಣಾಯಕ ಪಂದ್ಯದ ಟಾಸ್ ಗೆದ್ದ ಆಫ್ರಿಕಾ, ಟೀಂ ಇಂಡಿಯಾ ಬ್ಯಾಟಿಂಗ್, ಪಂದ್ಯಕ್ಕೆ ಮಳೆ ಅಡ್ಡಿ!

ಟೀಂ ಇಂಡಿಯಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಟೀಂ ಇಂಡಿಯಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 5ನೇ ಟಿ20 ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್ ಮಾಡಲಿದೆ. 

7 ಗಂಟೆ ಸುಮಾರಿಗೆ ಪಂದ್ಯ ಆರಂಭವಾಗಬೇಕಿತ್ತು ಆದರೆ ಮಳೆ ಶುರುವಾಗಿದ್ದರಿಂದ ಪಂದ್ಯ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ. 

ಟೀಂ ಇಂಡಿಯಾ ತಂಡ
ರುತುರಾಜ್ ಗಾಯಕವಾಡ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜುವೇಂದ್ರ ಚಾಹಲ್.

ದಕ್ಷಿಣ ಆಫ್ರಿಕಾ ತಂಡ
ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಕಗಿಸೊ ರಬಾಡ, ಕೇಶವ ಮಹಾರಾಜ್(ನಾಯಕ), ಅನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com