ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್!
ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ
Published: 26th June 2022 09:26 AM | Last Updated: 27th June 2022 01:23 PM | A+A A-

ರೋಹಿತ್ ಶರ್ಮಾ
ಮುಂಬೈ: ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಲೀಸೆಸ್ಟರ್‌ಶೈರ್ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡುತ್ತಿದ್ದ ರೋಹಿತ್ ಅವರನ್ನು ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗಿದೆ.
ಅಭ್ಯಾಸ ಪಂದ್ಯದ ಮೂರನೇ ದಿನದಾಟದ ನಂತರ ರೋಹಿತ್ ಗೆ ಕೊರೋನಾ ಪಾಸಿಟಿವ್ ಆಗಿರುವುದು ಸುದ್ದಿ ಬಹಿರಂಗವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 25 ರನ್ ಗಳಿಸಿದ ರೋಹಿತ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಮಾಡಿರಲಿಲ್ಲ. ಇದಕ್ಕೂ ಮುನ್ನ ರವಿಚಂದ್ರನ್ ಅಶ್ವಿನ್ ಭಾರತ ತೊರೆಯುವ ಮುನ್ನ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಂಬರುವ ಟೆಸ್ಟ್‌ಗೆ ಆಗಮಿಸುವುದು ವಿಳಂಬವಾಯಿತು.
ಈ ಕುರಿತು ಟ್ನೀಟ್ ಮಾಡಿರುವ ಬಿಸಿಸಿಐ, ಶನಿವಾರ ರಾಪಿಡ್ ಆಂಟಿಜಿನ್ ಟೆಸ್ಟ್ ನಡೆಸಿದ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಅವರು ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ ಎಂದು ತಿಳಿಸಿದೆ.
UPDATE - #TeamIndia Captain Mr Rohit Sharma has tested positive for COVID-19 following a Rapid Antigen Test (RAT) conducted on Saturday. He is currently in isolation at the team hotel and is under the care of the BCCI Medical Team.
— BCCI (@BCCI) June 25, 2022
ರೋಹಿತ್ ಶರ್ಮಾ ಗುಣಮುಖರಾದ ನಂತರ ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ಪ್ರಾರಂಭವಾಗುವ ಐದನೇ ಟೆಸ್ಟ್‌ನಲ್ಲಿ ರೋಹಿತ್ ಇಂಗ್ಲೆಂಡ್ ವಿರುದ್ಧ ತಂಡವನ್ನು ಮುನ್ನಡೆಸಲಿದ್ದಾರೆ.