ವಿರಾಟ್ ಗೆ ಪ್ರಪೋಸ್ ಮಾಡಿದ್ದ ಇಂಗ್ಲೆಂಡ್ ಆಟಗಾರ್ತಿ ಜೊತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್!
ಇಂಗ್ಲೆಂಡ್ ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರ್ತಿ ಡೇನಿಯಲ್ ವ್ಯಾಟ್ ಅವರ ಜೊತೆ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ.
Published: 28th June 2022 05:10 PM | Last Updated: 28th June 2022 06:14 PM | A+A A-

ಡೇನಿಯಲ್ ವ್ಯಾಟ್-ಅರ್ಜುನ್ ತೆಂಡೂಲ್ಕರ್
ಇಂಗ್ಲೆಂಡ್ ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರ್ತಿ ಡೇನಿಯಲ್ ವ್ಯಾಟ್ ಅವರ ಜೊತೆ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ.
ಅರ್ಜುನ್ ತೆಂಡೂಲ್ಕರ್ ಜೊತೆ ರೆಸ್ಟೋರೆಂಟ್ ನಲ್ಲಿರುವ ಫೋಟೋವೊಂದನ್ನು ವ್ಯಾಟ್ ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಾಕಿದ್ದು ಇದರ ಬೆನ್ನಲ್ಲೇ ವ್ಯಾಟ್ ಜೊತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ.
ಡೇನಿಯಲ್ ವ್ಯಾಟ್ ಈ ಹಿಂದೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಗೆ ಪ್ರಪೋಸ್ ಮಾಡಿದ್ದರು. ಅಂದು ಆಕೆ ಕೊಹ್ಲಿಯನ್ನು ಮದುವೆಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಆಕೆಯ ಹೆಸರು ಸಿಕ್ಕಾಪಟ್ಟೆ ವೈರಲ್ ಆಗಿತ್ತು.