ಐಪಿಎಲ್ 2022 ವೇಳಾಪಟ್ಟಿ ಬಿಡುಗಡೆ: ಮಾರ್ಚ್ 26ರಂದು CSK-KKR ಮೊದಲ ಪಂದ್ಯ
ಇಂಡಿಯನ್ ಪ್ರೀಮಿಯರ್ ಲೀಗ್ – 2022ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 26 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (CSK Vs KKR) ಮುಖಾಮುಖಿಯಾಗಲಿವೆ.
Published: 06th March 2022 09:42 PM | Last Updated: 06th March 2022 09:42 PM | A+A A-

ಐಪಿಎಲ್ ಟ್ರೋಫಿ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ – 2022ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 26 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (CSK Vs KKR) ಮುಖಾಮುಖಿಯಾಗಲಿವೆ. ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಐಪಿಎಲ್ 2022 ಲೀಗ್ನ ಕೊನೆಯ ಪಂದ್ಯವು ಮೇ 22 ರಂದು ರಾತ್ರಿ 7.30 ಕ್ಕೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದರಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳು ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯುವ ದಿನ. ಐಪಿಎಲ್ನಲ್ಲಿ ಬಹುತೇಕ ಪಂದ್ಯಗಳು ರಾತ್ರಿ 7.30ಕ್ಕೆ ನಡೆಯಲಿದ್ದು, ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಹಾಗೂ ಎರಡನೇ ಪಂದ್ಯ ರಾತ್ರಿ 7.30ಕ್ಕೆ ಎರಡು ಪಂದ್ಯಗಳಿರುವ ದಿನದಂದು ನಡೆಯಲಿದೆ.
IPL 2022 ಪೂರ್ಣ ವೇಳಾಪಟ್ಟಿ
Hello Fans
— IndianPremierLeague (@IPL) March 6, 2022
Set your reminders and mark your calendars.
Which team are you rooting for in #TATAIPL 2022pic.twitter.com/cBCzL1tocA
ಈ ಬಾರಿಯ ಐಪಿಎಲ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದ್ದು, ಮೇ 29 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ನಡೆಯಲಿರುವ ಲೀಗ್ನ ಎಲ್ಲಾ 70 ಪಂದ್ಯಗಳು ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿವೆ. ಮುಂಬೈನಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿದ್ದರೆ, ಪುಣೆಯಲ್ಲಿ 15 ಪಂದ್ಯಗಳು ನಡೆಯಲಿವೆ. ಈ ಬಾರಿ ಮುಂಬೈನ ವಾಂಖೆಡೆಯಲ್ಲಿ 20, ಸಿಸಿಐನಲ್ಲಿ 15, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ನಡೆಯಲಿವೆ. ಪುಣೆಯಿಂದ ಎಂಸಿಎ ಕ್ರೀಡಾಂಗಣದಲ್ಲಿ 15 ಪಂದ್ಯಗಳು ನಡೆಯಲಿವೆ.
ಈ ಬಾರಿಯ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ನಡುವೆ ನಡೆಯಲಿದ್ದು, ಎಂಎಸ್ ಧೋನಿ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಕಳೆದ ವರ್ಷ 2021 ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಬಾರಿ ಐಪಿಎಲ್ ಕೊರೊನಾ ನೆರಳಿನಲ್ಲಿ ನಡೆಯುತ್ತಿದ್ದು, ಅಭಿಮಾನಿಗಳು ಎಂಟ್ರಿ ಪಡೆಯುವ ಸಾಧ್ಯತೆ ಇದೆ. ಆರಂಭಿಕ ಪಂದ್ಯಗಳಲ್ಲಿ ಶೇ.25ರಷ್ಟು ಪ್ರೇಕ್ಷಕರು ಮೈದಾನಕ್ಕೆ ಬರಬಹುದು.