
ಡೆಲ್ಲಿ ಕ್ಯಾಪಿಟಲ್ಸ್
ಮುಂಬೈ: ಐಪಿಎಲ್ 2022ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಮುಂಬೈನ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿತ್ತು.
ಮುಂಬೈ ನೀಡಿದ 179 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನು 10 ಎಸೆತ ಬಾಕಿ ಇರುವಂತೆ 178 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಲಲಿತ್ ಯಾದವ್ ಅಜೇಯ 48 ರನ್ ಹಾಗೂ ಅಕ್ಷರ್ ಪಟೇಲ್ ಅಜೇಯ 38 ರನ್ ಬಾರಿಸಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮುಂಬೈ ಪರ ರೋಹಿತ್ ಶರ್ಮಾ 41, ಇಶಾನ್ ಕಿಶನ್ ಅಜೇಯ 81, ತಿಲಕ್ ವರ್ಮಾ 22 ರನ್ ಬಾರಿಸಿದ್ದಾರೆ.