ಬಿಜೆಪಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗವಹಿಸ್ತಾರಾ? ಮಾಜಿ ನಾಯಕ ಹೇಳಿದ್ದೇನು?
ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧಿವೇಶನದಲ್ಲಿ ತಾವು ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ ತಳ್ಳಿಹಾಕಿದ್ದಾರೆ.
Published: 10th May 2022 07:43 PM | Last Updated: 10th May 2022 07:48 PM | A+A A-

ರಾಹುಲ್ ದ್ರಾವಿಡ್
ನವದೆಹಲಿ: ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧಿವೇಶನದಲ್ಲಿ ತಾವು ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಳ್ಳಿಹಾಕಿದ್ದಾರೆ.
ಕೆಲ ಮಾಧ್ಯಮಗಳು ನಾನು ಮೇ 12-15 ರವರೆಗೆ ಹಿಮಾಚಲ ಪ್ರದೇಶದಲ್ಲಿ ನಡೆಯುವ ಬಿಜೆಪಿ ಸಭೆಗೆ ಹಾಜರಾಗುತ್ತೇನೆ ಎಂದು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದ ವರದಿ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ರಾಹುಲ್ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ.
ಮೇ 12 ರಿಂದ ಮೇ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಧರ್ಮಶಾಲಾ ಶಾಸಕ ವಿಶಾಲ್ ನೆಹ್ರಿಯಾ ಹೇಳಿಕೊಂಡಿದ್ದರು.
ಇದನ್ನೂ ಓದಿ: ಹಿಮಾಚಲ ಪ್ರದೇಶ: ಬಿಜೆಪಿ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಭಾಗಿ
ಮೇ 12 ರಿಂದ 15ರವರೆಗೆ ಧರ್ಮಶಾಲಾದಲ್ಲಿ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಸಚಿವರು, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ದ್ರಾವಿಡ್ ಅವರ ಉಪಸ್ಥಿತಿಯು ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಂದೇಶವನ್ನು ನೀಡುತ್ತದೆ ಎಂದು ಶಾಸಕ ವಿಶಾಲ್ ನೆಹ್ರಿಯಾ ಹೇಳಿದ್ದರು.