ಐಪಿಎಲ್: ತಂಡದಿಂದ ದೂರವಾದ ರವೀಂದ್ರ ಜಡೇಜಾರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದ ಚೆನ್ನೈ!!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದಲೇ ಹೊರಗುಳಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದೆ.
Published: 12th May 2022 04:15 PM | Last Updated: 12th May 2022 04:15 PM | A+A A-

ರವೀಂದ್ರ ಜಡೇಜಾ
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದಲೇ ಹೊರಗುಳಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದೆ.
ಹೌದು.. ರವೀಂದ್ರ ಜಡೇಜಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವಿನ ಬಿರುಕು ಇದೀಗ ದೊಡ್ಡದಾಗಿದೆ ಎಂದು ಹೇಳಲಾಗುತ್ತಿದ್ದು, ಸುಮಾರು 10 ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ನ ಅವಿಭಾಜ್ಯ ಅಂಗವಾಗಿರುವ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಅನ್ಫಾಲೋ ಮಾಡಿದೆ.
ಮೇ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಜಡೇಜಾ ಅವರು ಪಕ್ಕೆಲುಬಿನ ಮೂಗೇಟಿಗೊಳಗಾಗಿದ್ದರು. ಈ ಕಾರಣದಿಂದಾಗಿ ಐಪಿಎಲ್ನ ನಡೆಯುತ್ತಿರುವ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದರ ಬೆನ್ನಲ್ಲೇ ಈ ಸುದ್ದಿ ಹೊರಬಿದ್ದಿದೆ.
ಪ್ರಸ್ತುತ ಗಾಯಾಳು ರವೀಂದ್ರ ಜಡೇಜಾ ಅವರು ವೈದ್ಯರ ವೀಕ್ಷಣೆಯಲ್ಲಿದ್ದು, ವೈದ್ಯಕೀಯ ಸಲಹೆಯ ಆಧಾರದ ಮೇಲೆ ಅವರನ್ನು ಐಪಿಎಲ್ ಸೀಸನ್ನ ಉಳಿದ ಪಂದ್ಯಗಳಿಗೆ ಹೊರಗಿಡಲಾಗಿದೆ ಎಂದು ಸಿಎಸ್ ಕೆ ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.