
ಡೆಲ್ಲಿ ಕ್ಯಾಪಿಟಲ್ಸ್
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್ 2022ರ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ತಾನ ರಾಯಲ್ಸ್ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಪೇರಿಸಿತ್ತು.
ಆರ್ ಆರ್ ನೀಡಿದ 161 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನು 11 ಎಸೆತ ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 161 ರನ್ ಬಾರಿ ಗೆಲುವಿನ ನಗೆ ಬೀರಿತು.