ಐಪಿಎಲ್ 2022 ಪ್ಲೇ ಆಫ್ ಕದನ: ಯಾರು ಯಾರ ಎದುರಾಳಿ, ಇಲ್ಲಿದೆ ಸಂಪೂರ್ಣ ಪಟ್ಟಿ!!
ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದೊಂದಿಗೆ ಲೀಗ್ ಹಂತದ ಪಂದ್ಯಗಳು ಪೂರ್ಣಗೊಂಡಿವೆ.
Published: 22nd May 2022 11:50 AM | Last Updated: 23rd May 2022 01:41 PM | A+A A-

ಆರ್ ಸಿಬಿ ಆಟಗಾರರು
ಮುಂಬೈ: ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದೊಂದಿಗೆ ಲೀಗ್ ಹಂತದ ಪಂದ್ಯಗಳು ಪೂರ್ಣಗೊಂಡಿವೆ.
Playoffs spot sealed
— IndianPremierLeague (@IPL) May 21, 2022
Congratulations to the @RCBTweets on making it to the #TATAIPL 2022 playoffs! pic.twitter.com/pipXAVUQQg
ಡೆಲ್ಲಿ ತಂಡವನ್ನು ಮಣಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿದೆ. ಇದರೊಂದಿಗೆ ಐಪಿಎಲ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ನಾಲ್ಕು ಸ್ಥಾನಗಳಲ್ಲಿ ಉಳಿದವರು ಯಾರು ಎಂಬುದು ಖಚಿತವಾಗಿದೆ.
ಗುಜರಾತ್ ಟೈಟನ್ಸ್ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್, ಲಖನೌ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಂತರದ ಸ್ಥಾನಗಳಲ್ಲಿವೆ. ಒಂದು ವೇಳೆ ಶನಿವಾರದ ಪಂದ್ಯದಲ್ಲಿ ಡೆಲ್ಲಿ ಗೆದ್ದಿದ್ದರೆ, ಅದು ರನ್ ರೇಟ್ ಆಧಾರದಲ್ಲಿ ಆರ್ಸಿಬಿಯನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರುತ್ತಿತ್ತು.
ಸದ್ಯದ ಪಾಯಿಂಟ್ ಪಟ್ಟಿಯಂತೆ, ಆಗ್ರ ಎರಡು ತಂಡಗಳಾದ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮಂಗಳವಾರ ಕ್ವಾಲಿಫೈಯರ್–1 ಅನ್ನು ಆಡಲಿವೆ. ಇದರಲ್ಲಿ ಗೆದ್ದವರು ಫೈನಲ್ ಪ್ರವೇಶಿಸಲಿದ್ದಾರೆ. ಸೋತವರು ಲಖನೌ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಬುಧವಾರದ ಎಲಿಮಿನೇಟರ್ನಲ್ಲಿ ಗೆಲುವು ಸಾಧಿಸುವವರ ವಿರುದ್ಧ ಸೆಣಸಲಿದ್ದಾರೆ. ಇದರಲ್ಲಿ ಗೆದ್ದವರು ಫೈನಲ್ಗೆ ತಲುಪುತ್ತಾರೆ. ಸೋತವರು ಮೂರನೇ ಸ್ಥಾನ ಅಲಂಕರಿಸಲಿದ್ದಾರೆ.