ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2 ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ.
Published: 02nd November 2022 01:20 PM | Last Updated: 02nd November 2022 01:20 PM | A+A A-

ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ
ಅಡಿಲೇಡ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2 ನ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ನೆದರ್ಲೆಂಡ್ ಗೆ 5 ವಿಕೆಟ್ ಭರ್ಜರಿ ಜಯ ಸಾಧಿಸಿದೆ.
ಜಿಂಬಾಬ್ವೆ ನೀಡಿದ್ದ 118 ರನ್‌ಗಳ ಸಾಧಾರಣ ಗುರಿಯನ್ನು ಕೇವಲ 5 ವಿಕೆಟ್ ಕಳೆದುಕೊಂಡು ಇನ್ನೂ 12 ಎಸೆತಗಳು ಬಾಕಿ ಇರುವಂತೆಯೇ ನೆದರ್ಲ್ಯಾಂಡ್ಸ್ ತಂಡ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ನೆದರ್ಲ್ಯಾಂಡ್ಸ್ ತಂಡ ಸೂಪರ್ 12 ಹಂತದಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಇನ್ನೊಂದೆಡೆ ಈ ಸೋಲಿನೊಂದಿಗೆ ಜಿಂಬಾಬ್ವೆ ತಂಡದ ಸೆಮೀಸ್ ಕನಸು ಬಹುತೇಕ ಭಗ್ನವಾಗಿದೆ.
A good performance from Netherlands to seal a victory against Zimbabwe in Adelaide #T20WorldCup | #ZIMvNED | https://t.co/wGbASDnUsj pic.twitter.com/PRq9lAxdDi
— ICC (@ICC) November 2, 2022
ಅಡಿಲೇಡ್ ಓವೆಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜಿಂಬಾಬ್ವೆ ನೀಡಿದ್ದ ಸಾಧಾರಣ ಗುರಿ ಬೆನ್ನತ್ತಿದ ನೆದರ್ಲೆಂಡ್ ತಂಡವು ಒ'ಡೌಡ್-ಕೂಪರ್ ಅಮೋಘ ಜೊತೆಯಾಟದ ನೆರವಿನಿಂದ ಜಿಂಬಾಬ್ವೆ ವಿರುದ್ಧ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಸಾಧಾರಣ ಗುರಿ ಬೆನ್ನು ಹತ್ತಿದ ನೆದರ್ಲೆಂಡ್ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಆರಂಭಿಕ ಆಟಗಾರ ಸ್ಟಿಫನ್ ಮೈಬರ್ಗ್ ಕೇವಲ 8 ರನ್ ಬಾರಿಸಿ ಮುಜರಬಾನಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ನೆದರ್‌ಲೆಂಡ್ಸ್ ತಂಡವು 17 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್ ಸ್ಟಿಫನ್ ವಿಕೆಟ್ ಕಳೆದುಕೊಂಡಿತು.
ಇದನ್ನೂ ಓದಿ: ಟಿ20 ವಿಶ್ವಕಪ್ 2022: ನ್ಯೂಜಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ; ಅಂಕಪಟ್ಟಿಯಲ್ಲಿ 2ನೇ ಸ್ಥಾನ!
ಆರಂಭದಲ್ಲೇ ಸ್ಟಿಫನ್ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ನೆದರ್‌ಲೆಂಡ್ಸ್ ತಂಡಕ್ಕೆ ಎರಡನೇ ವಿಕೆಟ್‌ಗೆ ಟಾಮ್ ಕೂಪರ್ ಹಾಗೂ ಮ್ಯಾಕ್ಸ್ ಒ'ಡೌಡ್ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 73 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು. ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಟಾಮ್ ಕೂಪರ್ ಕೇವಲ 29 ಎಸೆತಗಳಲ್ಲಿ 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಆಕರ್ಷಕ 32 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಮ್ಯಾಕ್ ಒ ಡೌಡ್ 47 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 52 ರನ್ ಬಾರಿಸುವ ಮೂಲಕ ನೆದರ್‌ಲೆಂಡ್ಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.