ಟಿ-20 ವಿಶ್ವಕಪ್: ಜಿಂಬಾಬ್ವೆ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಮೆಲ್ಬರ್ನ್: ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಘಟ್ಟದಲ್ಲಿನ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.
ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ. ಆದಾಗ್ಯೂ, ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯವನ್ನು ಆಡುತ್ತಿದೆ.
ಟೀ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ಜಿಂಬಾಬ್ವೆ ತಂಡ ಇಂತಿದೆ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ , ರೆಗಿಸ್ ಚಕಬ್ವಾ (ವಿಕೆಟ್ ಕೀಪರ್) ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಟೋನಿ ಮುನ್ಯೊಂಗಾ, ರಿಯಾನ್ ಬರ್ಲ್, ಟೆಂಡೈ ಚಟಾರಾ, ರಿಚರ್ಡ್ ನಾಗರವ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಬಾನಿ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ