ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್; ಮತ್ತೊಂದು ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗುರುವಾರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಸಾಧನೆ ಮಾಡಿದ್ದ ಕೊಹ್ಲಿ ಇದೀಗ ಟಿ20 ವಿಶ್ವಕಪ್‌ನಲ್ಲಿ 1,100 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಅಡಿಲೇಡ್: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗುರುವಾರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಸಾಧನೆ ಮಾಡಿದ್ದ ಕೊಹ್ಲಿ ಇದೀಗ ಟಿ20 ವಿಶ್ವಕಪ್‌ನಲ್ಲಿ 1,100 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

ಅಡಿಲೇಡ್ ಓವಲ್‌ನಲ್ಲಿ ನಡೆದ ICC T20 ವಿಶ್ವಕಪ್‌ನ ಇಂಗ್ಲೆಂಡ್ ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಈ ಸಾಧನೆ ಮಾಡಿದ್ದು, ಇಂಗ್ಲೆಂಡ್ ವಿರುದ್ಧ ವಿರಾಟ್ 40 ಎಸೆತಗಳಲ್ಲಿ 50 ರನ್ ಗಳಿಸಿದರು. ಅವರ ಇನ್ನಿಂಗ್ಸ್ ನಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ಇತ್ತು. ಅವರು 125.00 ಸ್ಟ್ರೈಕ್ ರೇಟ್‌ನಲ್ಲಿ 50 ರನ್ ಗಳಿಸಿ ಔಟಾದರು. ಆ ಮೂಲದ ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ರನ್ ದಾಖಲಿಸಿದ ಆಟಗಾರ ಮತ್ತು 1100 ರನ್ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಶ್ರೀಲಂಕಾದ ದಿಗ್ಗಜ ಮಹೇಲಾ ಜಯವರ್ಧನೆ 1016 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ 965 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. 

ಟೂರ್ನಿಯಲ್ಲಿ 4ನೇ ಅರ್ಧಶತಕ
ಇನ್ನು ಹಾಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದು ಅವರ ನಾಲ್ಕನೇ ಅರ್ಧಶತಕವಾಗಿದೆ. ಅವರು ಪ್ರಸ್ತುತ ಟೂರ್ನಿಯಲ್ಲಿ ಇದುವರೆಗಿನ ಪ್ರಮುಖ ರನ್ ಸ್ಕೋರರ್ ಆಗಿದ್ದಾರೆ. ಅವರು ಆರು ಇನ್ನಿಂಗ್ಸ್‌ಗಳಲ್ಲಿ 98.66 ಸರಾಸರಿಯಲ್ಲಿ 296 ರನ್ ಗಳಿಸಿದ್ದಾರೆ. 

ಟಿ20 ಕ್ರಿಕೆಟ್‌ನಲ್ಲಿ 4,000 ರನ್‌ ಇತಿಹಾಸ
ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4,000 ರನ್‌ಗಳ ಪೇರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೂ ಕೊಹ್ಲಿ ಭಾಜನವಾಗಿದ್ದು, ಇಂದಿನ  ಅರ್ಧಶತಕದೊಂದಿಗೆ, ಟಿ20ಐ ಕ್ರಿಕೆಟ್‌ನಲ್ಲಿ ವಿರಾಟ್ ಅವರ ರನ್ ಗಳಿಕೆ 115 ಪಂದ್ಯಗಳ 107 ಇನ್ನಿಂಗ್ಸ್‌ಗಳಲ್ಲಿ 52.73 ಸರಾಸರಿಯಲ್ಲಿ 4,008 ರನ್‌ಗಳಿಗೆ ಏರಿಕೆಯಾಗಿದೆ. ಇದರಲ್ಲಿ ಒಂದು ಶತಕ ಮತ್ತು 37 ಅರ್ಧ ಶತಕಗಳು ಸೇರಿದ್ದು, ಅತ್ಯುತ್ತಮ ವೈಯಕ್ತಿಕ ಸ್ಕೋರ್ ಅಜೇಯ 122ರನ್ ಗಳಾಗಿದೆ. ಟಿ20ಐ ಕ್ರಿಕೆಟ್ ನಲ್ಲಿ ಸ್ಟ್ರೈಕ್ ರೇಟ್ 137.96 ಆಗಿದೆ.

ಉಳಿದಂತೆ ಈ ಪಟ್ಟಿಯಲ್ಲಿ ಭಾರತದ ಭಾರತದ ನಾಯಕ ರೋಹಿತ್ ಶರ್ಮಾ (3,853) 2ನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್‌ನ ಆರಂಭಿಕ ಅನುಭವಿ ಮಾರ್ಟಿನ್ ಗಪ್ಟಿಲ್ (3,531), ಪಾಕಿಸ್ತಾನದ ನಾಯಕ ಬಾಬರ್ ಅಜಮ್ (3,323) ಮತ್ತು ಐರ್ಲೆಂಡ್ ಆರಂಭಿಕ ಆಟಗಾರ ಪಾಲ್ ಸ್ಟಿರ್ಲಿಂಗ್ (3,181)  ನಂತರದ ಸ್ಥಾನಗಳಲ್ಲಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com