ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಕೊಹ್ಲಿ ನಿರಾಶೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಕೆ

ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ನವದೆಹಲಿ: ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಟ್ವೀಟ್ ಮೂಲಕ ಅಭಿಮಾನಿಗಳೊಂದಿಗೆ ತನ್ನ ಭಾವನೆ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, 'ನಮ್ಮ ಕನಸು ನನಸು ಮಾಡಿಕೊಳ್ಳದ ಕೊರತೆ ಹಾಗೂ ಹೃದಯದಲ್ಲಿ ನಿರಾಶೆಯೊಂದಿಗೆ  ಆಸ್ಟ್ರೇಲಿಯಾ ತೊರೆಯುತ್ತೇವೆ. ಆದರೆ, ತಂಡವಾಗಿ ಸ್ಮರಣೀಯ ಕ್ಷಣಗಳನ್ನು ಕಳೆದಿದ್ದೇವೆ ಮತ್ತು ಇಲ್ಲಿಂದ ಉತ್ತಮ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ಕ್ರೀಡಾಂಗಣಗಳಲ್ಲಿ ನಮ್ಮನ್ನು ಬೆಂಬಲಿಸಲು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ನಮ್ಮ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ಈ ಜರ್ಸಿಯನ್ನು ಧರಿಸಲು ಮತ್ತು ನಮ್ಮ ದೇಶವನ್ನು ಪ್ರತಿನಿಧಿಸಲು ಯಾವಾಗಲೂ ಹೆಮ್ಮೆಪಡುತ್ತೇನೆ ಎಂದು  ಹೇಳಿದ್ದಾರೆ.  

ಇಂಗ್ಲೆಂಡ್ ವಿರುದ್ಧ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ಲ್ಲಿ 4,000 ರನ್ ದಾಟಿದ ಮೊದಲ ಆಟಗಾರ ಎಂಬ ಖ್ಯಾತಿಯನ್ನು ಮುಡಿಗೇರಿಸಿಕೊಂಡರು. ಅಲ್ಲದೇ, ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕಿದ ಆಟಗಾರನಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com