ಐಸಿಸಿ ಟಿ20 ವಿಶ್ವಕಪ್ ಫೈನಲ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Published: 13th November 2022 01:28 PM | Last Updated: 13th November 2022 01:28 PM | A+A A-

ಟಾಸ್ ಗೆದ್ದ ಇಂಗ್ಲೆಂಡ್
ಮೆಲ್ಬರ್ನ್: ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮೆಲ್ಬರ್ನ್ ನ ಎಂಸಿಜಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯುತ್ತಿದ್ದು, ಇಂಗ್ಲೆಂಡ್ ತಂಡದ ನಾಯಕ ಜಾಸ್ ಬಟ್ಲರ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಹಿಂದಿನ ಎರಡೂ ಸೆಮಿ ಫೈನಲ್ ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡಗಳು ಜಯ ಕಂಡಿದ್ದು, ಈ ನಿಟ್ಟಿನಲ್ಲಿ ಇಂದಿನ ಪಂದ್ಯದಲ್ಲೂ ಚೇಸಿಂಗ್ ಮಾಡುವ ತಂಡಕ್ಕೆ ಅವಕಾಶ ಹೆಚ್ಚು ಎಂದು ಹೇಳಲಾಗಿತ್ತು.
Toss news from the MCG
England have won the toss and opted to bowl in the #T20WorldCupFinal against Pakistan #PAKvENGhttps://t.co/HdpneOINqo pic.twitter.com/I2ucGfsYCs— ICC (@ICC) November 13, 2022
ಅದರಂತೆ ಇಂಗ್ಲೆಂಡ್ ನಾಯಕ ಜಾಸ್ ಬಟ್ಲರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಿಚ್ ರಿಪೋರ್ಟ್
ಖ್ಯಾತ ಮಾಜಿ ಕ್ರಿಕೆಟಿಗ ಇಯಾನ್ ಬಿಷಪ್ ವರದಿ ನೀಡಿದ್ದು, ಪಿಚ್ ಮೇಲ್ಮೈಯಲ್ಲಿ ಕೆಲವು ಉತ್ತಮ ಒಣ ಹುಲ್ಲಿನ ಪ್ರದೇಶಗಳಿವೆ. ಆದರೆ ಹಸಿರು ತೇಪೆಗಳೂ ಇದ್ದೂ ಇದು ತುಂಬಾ ಶಾರ್ಟ್ ಬಾಲ್ ಎಸೆತಗಳಿಗೆ ಉತ್ತಮವಾಗಿರಲಿವೆ. ಬೇರೆ ಯಾವುದೇ ಮೈದಾನಕ್ಕಿಂತ ಇಲ್ಲಿ ಪವರ್ ಪ್ಲೇನಲ್ಲಿ ಚೆಂಡು ಹೆಚ್ಚು ತಿರುಗುವ ಸಾಧ್ಯತೆ ಇದೆ. ಹೀಗಾಗಿ ಇಂದು ಶಾಹೀನ್ ಅಫ್ರಿದಿ, ಬೆನ್ ಸ್ಟೋಕ್ಸ್, ಕ್ರಿಸ್ ವೋಕ್ಸ್ ರಂತಹ ವೇಗಿಗಳಿಗೆ ನೆರವಾಗುವ ಸಾಧ್ಯತೆ ಇದೆ.
ತಂಡಗಳು ಇಂತಿದೆ.
ಪಾಕಿಸ್ತಾನ:
ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಇಂಗ್ಲೆಂಡ್:
ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್