3ನೇ ಟಿ20: ಟಾಸ್ ಗೆದ್ದು ಕಿವೀಸ್ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಸರಣಿ ಗೆಲುವಿನ ವಿಶ್ವಾಸ!

ಭಾರತ ತಂಡದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್
ಟಾಸ್ ಗೆದ್ದ ನ್ಯೂಜಿಲೆಂಡ್

ನೇಪಿಯರ್: ಭಾರತ ತಂಡದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ನೇಪಿಯರ್ ನ ಮೆಕ್ ಲೀನ್ ಕ್ರೀಡಾಂಗಣದಲ್ಲಿ 3ನೇ ಟಿ20 ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಂಥಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ನ್ಯೂಜಿಲೆಂಡ್ ತಂಡದಿಂದ ನಾಯಕ ಕೇನ್ ವಿಲಿಯಮ್ಸನ್ ದೂರ ಉಳಿದಿದ್ದು, ವೈದ್ಯರ ಕಾಣುವ ಹಿನ್ನಲೆಯಲ್ಲಿ ಅವರು ಮೂರನೇ ಪಂದ್ಯದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಂದಿನ ತಂಡವನ್ನು ಟಿಮ್ ಸೌಥಿ ಮುನ್ನಡೆಸುತ್ತಿದ್ದಾರೆ. ವಿಲಿಯಮ್ಸನ್ ಬದಲಿಗೆ ಮಾರ್ಕ್ ಚಾಪ್ಮನ್ ತಂಡಕ್ಕೆ ಮರಳಿದ್ದಾರೆ.

ಈಗಾಗಲೇ ಮೊದಲ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೇ ರದ್ದಾಗಿದ್ದು, 2ನೇ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತ್ತು. ಮೂರನೇ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದ್ದು, ಪಂದ್ಯಕ್ಕೆ ಮಳೆ ಕಾಟ ಎದುರಾಗುವ ಸಾಧ್ಯತೆ ಇದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೇ ಸರಣಿಯಲ್ಲಿ 1-0 ಅಂತರದಲ್ಲಿ ಮುಂದಿರುವ ಭಾರತ ಸರಣಿ ಕೈವಶ ಮಾಡಿಕೊಳ್ಳಲಿದೆ. ಹೀಗಾಗಿ  ಇಂದಿನ  ಪಂದ್ಯ ನ್ಯೂಜಿಲೆಂಡ್ ಪಾಲಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

ನ್ಯೂಜಿಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ

ತಂಡಗಳು:
ಭಾರತ : ಇಶಾನ್ ಕಿಶನ್, ರಿಷಭ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಟಿಮ್ ಸೌಥಿ(ನಾಯಕ), ಲಾಕಿ ಫರ್ಗುಸನ್

ಪಿಚ್ ವರದಿ:
ಮಳೆಯಿಂದಾಗಿ ಪಿಚ್ ಒದ್ದೆಯಾಗಿದ್ದು, ಕವರ್ ಗಳಿದ್ದರೂ ಸಹ ಕೊಂಚ ಪ್ರಮಾಣದ ತೇವಾಂಶ ಪಿಚ್ ನಲ್ಲಿರುತ್ತದೆ. ಪಿಚ್ ಮೇಲೆ ಹುಲ್ಲಿನ ಮೇಲ್ಮೈ ಇದ್ದು, ಇದು ಬೌನ್ಸಿ ಎಸೆತಗಳಿಗೆ ನೆರವಾಗಲಿದೆ. ಹೀಗಾಗಿ ಇಂದು ಇಲ್ಲಿ ಸ್ಪಿನ್ನರ್ ಗಳಿಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆ ಇದೆ. ಟಾಸ್ ಗೆದ್ದ ನಾಯಕ ಚೇಸಿಂಗ್ ಮಾಡುವ ತಂಡಕ್ಕೆ ಉತ್ತಮ ಅವಕಾಶವಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com