ಬಾಂಗ್ಲಾದೇಶ ಪ್ರವಾಸ: ರವೀಂದ್ರ ಜಡೇಜಾ ಔಟ್, ಅವಕಾಶದ ನಿರೀಕ್ಷೆಯಲ್ಲಿ ಸೂರ್ಯಕುಮಾರ್‌ ಯಾದವ್!

ವರ್ಷದ ಕೊನೆಯಲ್ಲಿ ಭಾರತ ಬಾಂಗ್ಲಾದೇಶ ಪ್ರವಾಸಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಲಿದೆ. ಇನ್ನು ಟೀಂ ಇಂಡಿಯಾ ತಂಡವನ್ನು ಅದಾಗಲೇ ಬಿಸಿಸಿಐ ಪ್ರಕಟಿಸಿದೆ. 
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ಮುಂಬೈ: ವರ್ಷದ ಕೊನೆಯಲ್ಲಿ ಭಾರತ ಬಾಂಗ್ಲಾದೇಶ ಪ್ರವಾಸಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಲಿದೆ. ಇನ್ನು ಟೀಂ ಇಂಡಿಯಾ ತಂಡವನ್ನು ಅದಾಗಲೇ ಬಿಸಿಸಿಐ ಪ್ರಕಟಿಸಿದೆ. 

ಬಾಂಗ್ಲಾದೇಶ ಪ್ರವಾಸದಲ್ಲಿ ನಡೆಯಲಿರುವ ಏಕದಿನ ಮತ್ತು ಟೆಸ್ಟ್ ತಂಡಗಳಲ್ಲಿ ಎಡಗೈ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಜಡೇಜಾ ಅವರ ಫಿಟ್ನೆಸ್ ನೋಡಿದರೆ, ಅವರು ಪ್ರವಾಸದ ಮೊದಲು ಫಿಟ್ ಆಗುವುದು ಬಹುತೇಕ ಅಸಾಧ್ಯವೆಂದು ತೋರುತ್ತದೆ. ಶೀಘ್ರದಲ್ಲೇ ಅವರ ಬದಲಿ ಆಟಗಾರನನ್ನು ಬಿಸಿಸಿಐ ಪ್ರಕಟಿಸುವ ಸಾಧ್ಯತೆಯಿದೆ.

ಗಾಯದ ಸಮಸ್ಯೆಯಿಂದಾಗಿ ಜಡೇಜಾ ಟಿ20 ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಏಷ್ಯಾಕಪ್‌ನಲ್ಲಿ ಜಡೇಜಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದು ಅವರು ಇನ್ನೂ ಚೇತರಿಸಿಕೊಂಡಿಲ್ಲ. ಈ ಕಾರಣಕ್ಕಾಗಿ, ಅವರು ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ನಲ್ಲೂ ಆಡಲಿಲ್ಲ. ಏಷ್ಯಾಕಪ್‌ನಿಂದ ಜಡೇಜಾ ತಂಡದಿಂದ ಹೊರಗುಳಿದಿದ್ದಾರೆ. ಆಗಸ್ಟ್ 31ರಂದು ದುಬೈನಲ್ಲಿ ಹಾಂಗ್ ಕಾಂಗ್ ವಿರುದ್ಧದ ಪಂದ್ಯ ಅವರ ತಮ್ಮ ಕೊನೆಯ ಪಂದ್ಯವಾಗಿತ್ತು.

ಇತ್ತೀಚೆಗೆ, ಬಾಂಗ್ಲಾದೇಶ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವಾಗ ಜಡೇಜಾ ಅವರ ವಿಷಯವಾಗಿ ಬಿಸಿಸಿಐ ಹಿರಿಯ ಆಯ್ಕೆ ಸಮಿತಿಯು ನಿರ್ದಿಷ್ಟವಾಗಿ ಉಲ್ಲೇಖಿಸಿತ್ತು. ಅಕ್ಟೋಬರ್ 31ರಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ಜಡೇಜಾ ಅವರು ಪ್ರವಾಸದಲ್ಲಿ ಭಾಗವಹಿಸುವುದು ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ ಎಂದು ಹೇಳಿತ್ತು.

ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ವೃತ್ತಿಜೀವನದ ವಿಶೇಷವಾಗಿ ಟಿ20 ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವರ್ಷ ಅವರು 31 ಇನ್ನಿಂಗ್ಸ್‌ಗಳಲ್ಲಿ 187.43 ಸ್ಟ್ರೈಕ್ ರೇಟ್‌ನಲ್ಲಿ 1,164 ರನ್ ಪೇರಿಸಿದ್ದಾರೆ. 2022ರಲ್ಲಿ ಟಿ20 ಆವೃತ್ತಿಯಲ್ಲಿ ಎರಡು ಶತಕಗಳು ಮತ್ತು ಒಂಬತ್ತು ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇಲ್ಲಿಯವರೆಗೆ, ಸೂರ್ಯಕುಮಾರ್ ಕ್ರಿಕೆಟ್‌ನ ಕಡಿಮೆ ಅಂತಾರಾಷ್ಟ್ರೀಯ ಸ್ವರೂಪದಲ್ಲಿ 1,000 ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.

ಬಾಂಗ್ಲಾದೇಶ ಪ್ರವಾಸಕ್ಕಾಗಿ ಭಾರತದ ಏಕದಿನ ಮತ್ತು ಟೆಸ್ಟ್ ತಂಡಗಳು
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (wk), ಇಶಾನ್ ಕಿಶನ್ (wk), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್ ಮತ್ತು ಯಶ್ ದಯಾಳ್.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (wk), ಕೆಎಸ್ ಭರತ್ (wk), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.

ಬಾಂಗ್ಲಾದೇಶ ಪ್ರವಾಸದ ವೇಳಾಪಟ್ಟಿ
ಭಾರತೀಯ ಕ್ರಿಕೆಟ್ ತಂಡ ಡಿಸೆಂಬರ್ 4ರಿಂದ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಸರಣಿಯ ಮುಂದಿನ ಎರಡು ಪಂದ್ಯಗಳು ಡಿಸೆಂಬರ್ 7 ಮತ್ತು 10 ರಂದು ನಡೆಯಲಿದೆ. ಭಾರತ ಎರಡು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯವನ್ನು ಡಿಸೆಂಬರ್ 14 ಮತ್ತು ಎರಡನೇ ಪಂದ್ಯವನ್ನು ಡಿಸೆಂಬರ್ 22ರಂದು ಆಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com