2ನೇ ಟಿ20: ಭಾರತ ತಂಡ ಬೃಹತ್ ಮೊತ್ತ, ಭರ್ಜರಿ ಬ್ಯಾಟಿಂಗ್ ಮೂಲಕ 2 ದಾಖಲೆ ನಿರ್ಮಿಸಿದ ಸೂರ್ಯಕುಮಾರ್ ಯಾದವ್

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ಸೂರ್ಯ ಕುಮಾರ್ ಯಾದವ್ ಎರಡೆರಡು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಸೂರ್ಯ ಕುಮಾರ್ ಯಾದವ್
ಸೂರ್ಯ ಕುಮಾರ್ ಯಾದವ್

ಗುವಾಹತಿ: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ಸೂರ್ಯ ಕುಮಾರ್ ಯಾದವ್ ಎರಡೆರಡು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಗುವಾಹತಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ನಿಗದಿತ 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ ಬರೊಬ್ಬರಿ 237 ರನ್ ಗಳ ಬೃಹತ್ ಗುರಿ ನೀಡಿತು. ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಸೂರ್ಯ ಕುಮಾರ್ ಯಾದವ್ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು. ಕೇವಲ 22 ಎಸೆತಗಳನ್ನು ಎದುರಿಸಿದ ಸೂರ್ಯ ಕುಮಾರ್ ಯಾದವ್ 5 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 61 ರನ್ ಗಳನ್ನು ಸಿಡಿಸಿದರು. 28 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 7 ಬೌಂಡರಿ ಸಹಿತ ಅಜೇಯ 49ರನ್ ಸಿಡಿಸಿದರು. ಈ ಪಂದ್ಯದಲ್ಲಿ ಈ ಜೋಡಿ 14.57 ರನ್ ರೇಟ್ ನಲ್ಲಿ ಶತಕದ ಜೊತೆಯಾಟವಾಡಿದ್ದು, ಇದು ದಾಖಲೆಯಾಗಿದೆ.

ಎರಡೆರಡು ವಿಶ್ವ ದಾಖಲೆ
ಈ ಪಂದ್ಯದ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಸೂರ್ಯ ಕುಮಾರ್ ಯಾದವ್ ಎರಡೆರಡು ವಿಶ್ವ ದಾಖಲೆ ನಿರ್ಮಿಸಿದ್ದಾರೆ. 

ವೇಗದ ಅರ್ಧಶತಕ
ಈ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಇದು ಭಾರತದ ಪರ ಅತೀ ಕಡಿಮೆ ಎಸೆತಗಳಲ್ಲಿ ದಾಖಲಾದ ಮೂರನೇ ಅರ್ಧಶತಕ ಎಂಬ ಕೀರ್ತಿಗೆ ಭಾಜನವಾಗಿದೆ. ಇದಕ್ಕೂ ಮೊದಲು 2007ರಲ್ಲಿ ಡರ್ಬನ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲೇ ಅರ್ಧಶತಕ ಸಿಡಿಸಿದ್ದರು. ಅದೇ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಬೌಲಿಂಗ್ ನಲ್ಲಿ ಯುವಿ ಆರು ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದು ಭಾರತದ ಪರ ದಾಖಲಾದ ವೇಗದ ಅರ್ಧಶತಕ ಎಂಬ ದಾಖಲೆ ಹೊಂದಿದೆ.

Fastest T20I 50s for India by balls faced
12 Yuvraj Singh v Eng Durban 2007
18 KL Rahul v Sco Dubai 2021
18 Surya Kumar Yadav v SA Guwahati 2022 *
19 Gautam Gambhir v SL Nagpur 2009
20 Yuvraj Singh v Aus Durban 2007
20 Yuvraj Singh v SL Mohali 2009

ಟಿ20ಯಲ್ಲಿ ವೇಗದ ಸಾವಿರ ರನ್
ಅಂತೆಯೇ ಇದೇ ಪಂದ್ಯದಲ್ಲಿ ತಮ್ಮ ಅಮೋಘ 61 ರನ್ ಗಳ ನೆರವಿನ ಮೂಲಕ ಟಿ20ಯಲ್ಲಿ ಸೂರ್ಯ ಕುಮಾರ್ ಯಾದವ್ ತಮ್ಮ ರನ್ ಗಳಿಕೆಯನ್ನು 1 ಸಾವಿರಕ್ಕೇರಿಸಿಕೊಂಡರು. ಆ ಮೂಲಕ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಕೀರ್ತಿಗೂ ಸೂರ್ಯ ಕುಮಾರ್ ಯಾದವ್ ಭಾಜನರಾದರು. ಸೂರ್ಯ ಕುಮಾರ್ ಯಾದವ್ ಈ ಸಾವಿರ ರನ್ ಗಳಿಕೆಗಾಗಿ ಕೇವಲ 573 ಎಸೆತಗಳನ್ನು ಮಾತ್ರ ಬಳಸಿದ್ದಾರೆ. ಇದಕ್ಕೂ ಮೊದಲು ಈ ಪಟ್ಟಿಯಲ್ಲಿ 604 ಎಸೆತಗಳಲ್ಲಿ ಸಾವಿರ ರನ್ ಗಳಿಸಿದ್ದ ಗ್ಲೇನ್ ಮ್ಯಾಕ್ಸ್ ವೆಲ್ ಅಗ್ರ ಸ್ಥಾನಿಯಾಗಿದ್ದರು. ಇದೀಗ ಅವರು 2ನೇ ಸ್ಥಾನಕ್ಕೆ ಕುಸಿದಿದ್ದಾರೆ.

STAT: Fastest to 1000 T20I runs by balls faced
573 Surya Kumar Yadav (SR 174) *
604 Glenn Maxwell (SR 166)
635 Colin Munro (SR 157)
640 Evin Lewis (SR 156)
654 Thisara Perera (SR 153)

 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com