ಭಾರತ vs ದ.ಆಫ್ರಿಕಾ ಏಕದಿನ ಸರಣಿ: ಶಿಖರ್ ಧವನ್ ನಾಯಕತ್ವ, ಶ್ರೇಯಸ್ ಅಯ್ಯರ್ ಉಪನಾಯಕ

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಬಿಸಿಸಿಐ ಆಯ್ಕೆ ಸಮಿತಿಯು ಟೀಂ ಇಂಡಿಯಾವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಸರಣಿಗೆ ಭಾನುವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಶಿಖರ್ ಧವನ್
ಶಿಖರ್ ಧವನ್

ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಬಿಸಿಸಿಐ ಆಯ್ಕೆ ಸಮಿತಿಯು ಟೀಂ ಇಂಡಿಯಾವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಸರಣಿಗೆ ಭಾನುವಾರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ ಮತ್ತು ಇಶಾನ್ ಕಿಶನ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮುಖೇಶ್ ಕುಮಾರ್ ಅವರು ಭಾರತ ತಂಡದಲ್ಲಿ ತಮ್ಮ ಚೊಚ್ಚಲ ಸ್ಥಾನ ಗಳಿಸಿದ್ದಾರೆ ಮತ್ತು ಅವೇಶ್ ಖಾನ್, ಮೊಹಮ್ಮದ್ ಸಿರಾಜ್ ಮತ್ತು ದೀಪಕ್ ಚಾಹರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರವಿ ಬಿಷ್ಣೋಯ್, ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ಕೂಡ ತಂಡದ ಭಾಗವಾಗಿದ್ದಾರೆ.

ಮೊದಲ ಏಕದಿನ ಪಂದ್ಯ ಅಕ್ಟೋಬರ್ 6 ರಂದು ನಡೆಯಲಿದ್ದು, ಉಳಿದ ಎರಡು ಏಕದಿನ ಪಂದ್ಯಗಳು ಅಕ್ಟೋಬರ್ 9 ಮತ್ತು 11 ರಂದು ನಡೆಯಲಿವೆ.

ಭಾರತ ಏಕದಿನ ತಂಡ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದುಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ದೀಪಕ್ ಚಹಾರ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com