3ನೇ ಟಿ20: ಮತ್ತೊಮ್ಮೆ ಡಕೌಟ್, ಹೀನಾಯ ದಾಖಲೆ ಬರೆದ ರೋಹಿತ್ ಶರ್ಮಾ

ದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೀನಾಯ ದಾಖಲೆಯೊಂದಕ್ಕೆ ಕಾರಣರಾಗಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೀನಾಯ ದಾಖಲೆಯೊಂದಕ್ಕೆ ಕಾರಣರಾಗಿದ್ದಾರೆ.

ಇಂದೋರ್ ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ಟೀಂ ಇಂಡಿಯಾ 18.3 ಓವರ್‌ಗಳಲ್ಲಿ 178 ರನ್ ಸಿಡಿಸಿ ಆಲೌಟ್ ಆಯಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ 49 ರನ್ ಗೆಲುವು ದಾಖಲಿಸಿತು. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗುವ ಮೂಲಕ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

ಭಾರತದ ಇನ್ನಿಂಗ್ಸ್ ನ 2ನೇ ಎಸೆತದಲ್ಲೇ ರೋಹಿತ್ ಶರ್ಮಾ ರಬಾಡಾ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆಗಿ ಔಟಾದರು. ಈ ಮೂಲಕ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ 10ನೇ ಬಾರಿಗೆ ಶೂನ್ಯಕ್ಕೆ ಔಟಾಗಿದ್ದು, ಆ ಮೂಲಕ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಆಟಗಾರ ಎಂಬ ಹೀನಾಯ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ ಬಳಿಕ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವುದು ಕೆಎಲ್ ರಾಹುಲ್ 5 ಬಾರಿ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ಕೊಹ್ಲಿ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

top three Indian batters with most ducks in T20Is: 
1) Rohit Sharma - 10*
2) KL Rahul - 5
3) Virat Kohli - 4

ಇನ್ನು ಜಾಗತಿಕ ಕ್ರಿಕೆಟ್ ನಲ್ಲೂ ರೋಹಿತ್ ಶರ್ಮಾ ಹೀನಾಯ ದಾಖಲೆ ಬರೆದಿದ್ದು, ಅತೀ ಹೆಚ್ಚು ಬಾರಿ ಒಂದಂಕಿ ಮೊತ್ತಕ್ಕೆ ಔಟಾದ ಆಟಗಾರ ಎಂಬ ಹೀನಾಯ ದಾಖಲೆ ಬರೆದಿದ್ದಾರೆ. ಇಂದಿನ ಪಂದ್ಯವೂ ಸೇರಿದಂತೆ ರೋಹಿತ್ ಶರ್ಮಾ ಒಟ್ಟು 43 ಬಾರಿ ಒಂದಂಕಿ ಮೊತ್ತಕ್ಕೆ ಔಟಾಗಿದ್ದು, ಆತೀ ಹೆಚ್ಚು ಬಾರಿ ಒಂದಂಕಿ ಮೊತ್ತಕ್ಕೆ ಔಟಾದ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಉಳಿದಂತೆ ಐರ್ಲೆಂಡ್ ತಂಡ ಕೆವಿನ್ ಒಬ್ರಿಯಾನ್ 42 ಬಾರಿ, ಬಾಂಗ್ಲಾದೇಶದ ಮುಶ್ಪಿಕರ್ ರಹೀಂ 40 ಬಾರಿ, ಆಫ್ಘಾನಿಸ್ತಾನದ ಮಹಮದ್ ನಬಿ 39 ಬಾರಿ  ಮತ್ತು ಪಾಕಿಸ್ತಾನದ ಶಾಹಿದ್ ಅಫ್ರಿದಿ 37 ಬಾರಿ ಒಂದಂಕಿ ಮೊತ್ತಕ್ಕೆ ಔಟಾಗಿದ್ದಾರೆ.

Most times out at single-digit score in men's T20Is:
43 - Rohit Sharma (IND)
42 - Kevin O'Brien (IRE)
40 - Mushfiqur Rahim (BAN)
39 - Mohammad Nabi (AFG)
37 - Shahid Afridi (PAK)

ರಬಾಡಾಗೆ 11ಬಾರಿ ವಿಕೆಟ್ ಒಪ್ಪಿಸಿ ರೋಹಿತ್ ಶರ್ಮಾ
ದಕ್ಷಿಣ ಆಫ್ರಿಕಾ ರಬಾಡಾ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾರನ್ನು ಅತೀಹೆಚ್ಚು ಬಾರಿ ಔಟ್ ಮಾಡಿದ ಜಂಟಿ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ಬೌಲರ್ ಟಿಮ್ ಸೌಥಿ ಕೂಡ ರೋಹಿತ್ ಶರ್ಮಾರನ್ನು 11 ಬಾರಿ ಔಟ್ ಮಾಡಿದ ಸಾಧನೆ ಮಾಡಿದ್ದಾರೆ. ಉಳಿದಂತೆ ರೋಹಿತ್ ಶರ್ಮಾ ಶ್ರೀಲಂಕಾದ ಎಂಜೆಲೋ ಮ್ಯಾಥ್ಯೂಸ್ ಗೆ 10 ಬಾರಿ, ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಗೆ 8 ಬಾರಿ, ದಕ್ಷಿಣ ಆಫ್ರಿಕಾದ ಮಾರ್ನೆ ಮಾರ್ಕೆಲ್ ಬೌಲಿಂಗ್ ನಲ್ಲಿ 7 ಬಾರಿ ಔಟಾಗಿದ್ದಾರೆ.

11 T Southee/ K Rabada
10 A Mathews
8 T Boult
7 M Morkel

 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com