ಮಹಿಳಾ ಏಷ್ಯಾ ಕಪ್: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ

ಮಹಿಳಾ ಏಷ್ಯಾ ಕಪ್ ಟೂರ್ನಿಯ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. 
ಭಾರತ ಮಹಿಳಾ ತಂಡ
ಭಾರತ ಮಹಿಳಾ ತಂಡ

ಸೈಲೆಟ್‌: ಮಹಿಳಾ ಏಷ್ಯಾ ಕಪ್ ಟೂರ್ನಿಯ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. 

ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಥಾಯ್ಲೆಂಡ್ 15.1 ಓವರ್ ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಕೇವಲ 37 ರನ್ ಗಳಿಸಿತು.

ಗೆಲುವಿಗೆ 38 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ ಸ್ಮೃತಿ ಮಂಧನಾ ನೇತೃತ್ವದ ಭಾರತ ತಂಡ, ಒಂದು ವಿಕೆಟ್ ನಷ್ಟಕ್ಕೆ ಕೇವಲ 6 ಓವರ್ ನಲ್ಲಿ 40 ರನ್ ಬಾರಿಸಿ ಸೆಮಿ ಫೈನಲ್ ಪ್ರವೇಶಿಸಿತು.

ಭಾರತ ತಂಡ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮಾತ್ರ ಭಾರತ ಸೋಲು ಅನುಭವಿಸಿದೆ. ಭಾರತ ಈ ಆರು ಪಂದ್ಯಗಳಿಂದ 10 ಅಂಕಗಳನ್ನು ಹೊಂದಿದೆ. 

ದೀಪ್ತಿ ಶರ್ಮಾ 10 ರನ್ ಗೆ 2 ವಿಕೆಟ್, ಸ್ನೇಹ್ ರಾಣಾ 9 ರನ್ ಗೆ 3 ವಿಕೆಟ್, ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ 8 ರನ್ ಗೆ 2 ವಿಕೆಟ್, ಮೇಘನಾ ಸಿಂಗ್ ಒಂದು ವಿಕೆಟ್ ಪಡೆಯುವ ಮೂಲಕ ಥಾಯ್ಲೆಂಡ್ ತಂಡವನ್ನು ಆಲೌಟ್ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com