ಬಿಸಿಸಿಐ ನೂತನ ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ, ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.
ರೋಜರ್ ಬಿನ್ನಿ
ರೋಜರ್ ಬಿನ್ನಿ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.

ರೋಜರ್  ಬಿನ್ನಿ ಭಾರತ ತಂಡದ ಮಾಜಿ ಆಟಗಾರರೂ ಆಗಿದ್ದು 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರೂ ಆಗಿದ್ದಾರೆ.

ಸೌರವ್ ಗಂಗೂಲಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ನ 36 ನೇ ಅಧ್ಯಕ್ಷರಾಗಿ ಬಿನ್ನಿ ನೇಮಕಗೊಂಡಿದ್ದಾರೆ. ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದರು. 

ಇನ್ನು ಬಿಸಿಸಿಐ ನ ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಯಲಿದ್ದಾರೆ. 1955 ಜುಲೈ 19ರಂದು ಜನಿಸಿದ ರೋಜರ್ ಬಿನ್ನಿ 1979ರಿಂದ 1987ರವರೆಗೆ ಭಾರತ ಕ್ರಿಕೆಟ್ ತಂಡದಲ್ಲಿದ್ದರು. ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com