ಬಿಸಿಸಿಐ ನೂತನ ಅಧ್ಯಕ್ಷ ರೋಜರ್‌ ಬಿನ್ನಿಗೆ ಶುಭ ಕೋರಿದ ಗಂಗೂಲಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರೋಜರ್ ಬಿನ್ನಿ ಅವರಿಗೆ ನಿರ್ಗಮಿತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶುಭ ಕೋರಿದ್ದಾರೆ.
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರೋಜರ್ ಬಿನ್ನಿ ಅವರಿಗೆ ನಿರ್ಗಮಿತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶುಭ ಕೋರಿದ್ದಾರೆ.

ಬಿಸಿಸಿಐನ ಹೊಸ ಪದಾಧಿಕಾರಿಗಳು ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹೇಳಿದ್ದಾರೆ.

"ರೋಜರ್ ಬಿನ್ನಿ ಅವರಿಗೆ ನಾನು ಶುಭ ಹಾರೈಸುತ್ತೇನೆ. ಹೊಸ ತಂಡ ಬಿಸಿಸಿಐ ಅನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ಬಿಸಿಸಿಐ ಉತ್ತಮ ಸ್ಥಾನದಲ್ಲಿದೆ. ಭಾರತೀಯ ಕ್ರಿಕೆಟ್ ಬಲಿಷ್ಠವಾಗಿದೆ. ಆದ್ದರಿಂದ ನಾನು ಅವರಿಗೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ" ಎಂದು ಗಂಗೂಲಿ ಹೇಳಿದ್ದಾರೆ.

ಗಂಗೂಲಿ ಅವರನ್ನು ಬಿಸಿಸಿಐ ಅಧ್ಯಕ್ಷರಾಗಿ ಎರಡನೇ ಅವಧಿಗೆ ಆಯ್ಕೆ ಮಾಡಲಿಲ್ಲ ಮತ್ತು ಅಕ್ಟೋಬರ್ 11 ರಂದು ಟ್ರೈಡೆಂಟ್‌ನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಅವರನ್ನು ಹುದ್ದೆಯಿಂದ ತೆಗೆದುಹಾಕುವ ನಿರ್ಧಾರ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com